ನೆಲಮಂಗಲ: ಯೂಟರ್ನ್ ತೆಗೆದುಕೊಳ್ಳುವ ವೇಳೆ ನಿರ್ಲಕ್ಷ್ಯದ ಚಾಲನೆ ಮಾಡಿದನೆಂದು ಆರೋಪಿಸಿ ಸ್ಥಳೀಯರು ಲಾರಿ ಚಾಲಕನನ್ನು ಹಿಡಿದು ಥಳಿಸಿರುವ ಘಟನೆ ನಡೆದಿದೆ.ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗುಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಗಟನೆ ನಡೆದಿದೆ. ಲಾರಿ ಚಾಲಕ ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ನಿರ್ಲಕ್ಷ್ಯ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಅಲ್ಲದೇ ಲಾರಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಹೀಗಾಗಿ ಚಾಲಕ ನಿರ್ಲಕ್ಷ್ಯ ಚಾಲನೆ ಮಾಡಿದನೆಂದು ಆತನಿಗೆ ಸ್ಥಳೀಯರು ಧರ್ಮದೇಟು ಕೊಟ್ಟು ಬುದ್ಧಿ ಕಲಿಸಿದ್ದಾರೆ. ಅದೃಷ್ಟವಶಾತ್ ಬೈಕ್ ಸವಾರ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.


 Advertisement 







 Advertisement 




Sign in to your account
Username or Email Address


Password

 Remember Me


