– ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು (Drug Trafficking) ತೀವ್ರ ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಹೇಳಿದರು.ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳಿಂದ (Pain Killer Tablets) ನಮಗೆ ಆತಂಕವಿದೆ. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುದನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲಾ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ: ರವಿಕುಮಾರ್ ಕಿಡಿSign in to your account
Username or Email Address


Password

 Remember Me


