ದಾವಣಗೆರೆ: ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದರೆ ಹೋರಾಟ ನಡೆಸುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಗೆ ನೀಡಿದ್ದಾರೆ.ದಾವಣಗೆರೆಯಲ್ಲಿ ಮಾತನಾಡಿದ ಅವರು, ಗೋ ರಕ್ಷಕ ಶಿವು ಉಪ್ಪಾರ್ ಸಾವು ಆತ್ಮಹತ್ಯೆಯಿಂದ ಆಗಿದಲ್ಲ, ಅವನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಈ ಸಂಬಂಧ ಎಲ್ಲಾ ಸಾಕ್ಷಿಗಳಿದ್ದರೂ ಆರೋಪಿಗಳನ್ನು ಯಾಕೆ ಬಂಧಿಸುತ್ತಿಲ್ಲ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂಬಂಧ ಗೋ ರಕ್ಷಕನ ಸಾವಿಗೆ ನ್ಯಾಯ ನೀಡಲು ಜುಲೈ 8ಕ್ಕೆ ಶ್ರೀರಾಮ ಸೇನೆ ನೇತೃತ್ವದಲ್ಲಿ ಎಲ್ಲಾ ಹಿಂದೂ ಸಂಘಟನೆಗಳು ಸೇರಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, ಇದರಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರಿಂದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಘೇರಾವ್ ಹಾಕಲಾಗುವುದು ಎಂದು ತಿಳಿಸಿದರು.ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಂಡು ಸರ್ಕಾರ ಶಿವು ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಸರ್ಕಾರ ಆರೋಪಿಗಳನ್ನು ಬಂಧಿಸದಿದ್ದರೆ ಡಿಸಿ ಕಚೇರಿಗೆ ಘೇರಾವ್ ಹಾಕಲು ನಿರ್ಧಾರಿಸಿದ್ದೇವೆ. ಈ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಗೆ ಕೊಟ್ಟರು.ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷದವರಿಗೂ ಒಂದು ಹಸುವಿಗೆ ಇಂತಿಷ್ಟು ಹಣ ಎಂದು ಮಾಮೂಲಿ ಹೋಗುತ್ತಿದೆ. ಕಸಾಯಿಖಾನೆಗಳಿಗೆ ಹಸು ಸಾಗಾಟಕ್ಕೆ ತಡೆ ಹಾಕಲೇಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆ ನೇತೃತ್ವದಲ್ಲಿ ತಡೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.Sign in to your account
Username or Email Address


Password

 Remember Me


