ಮೈಸೂರು: ನಗರದ ಸಬ್ ಇನ್‌ಸ್ಪೆಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ.ಉಮಾಶಂಕರ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಉಮಾಶಂಕರ್ ತಮ್ಮ ಬೈಕಿನಲ್ಲಿ ಮೈಸೂರಿನ ಜೆಎಲ್‍ಬಿ ರಸ್ತೆಯ ಮುಡಾ ಸರ್ಕಲ್ ಬಳಿ ಹೋಗುತ್ತಿದ್ದರು. ಈ ವೇಳೆ ಕೆಎಸ್‍ಆರ್ ಟಿಸಿ ಬಸ್ ಉಮಾಶಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಮಾಶಂಕರ್ ಗೆ ತೀವ್ರ ಪೆಟ್ಟು ಬಿದ್ದಿದೆ. ಅಲ್ಲದೆ ತೀವ್ರ ರಕ್ತಸ್ರಾವದಿಂದ ಗಾಯಾಳು ಉಮಾಶಂಕರ್ ಬಳಲುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.ಅಂಬುಲೆನ್ಸ್ ಗೆ ಕರೆ ಮಾಡಿದರೂ ಸಕಾಲಕ್ಕೆ ಬಾರದ ಕಾರಣ, ಅದೇ ಮಾರ್ಗವಾಗಿ ತೆರಳುತ್ತಿದ್ದ ಕೆ.ಆರ್ ಸಂಚಾರಿ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಶಿವಕುಮಾರ್, ತಮ್ಮ ಇಂಟರ್ ಸೆಪ್ಟರ್ ವಾಹನದಲ್ಲಿಯೇ ಉಮಾಶಂಕರ್ ಅವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಪೊಲೀಸರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


