ಬೆಂಗಳೂರು: ಕುಡಿದಿದನ್ನು ಪ್ರಶ್ನೆ ಮಾಡಿದಕ್ಕೆ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಗೆ ಚಾಕು ಇರಿದ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ.ಪ್ರದೀಪ್ ಪತ್ನಿಯ ಕುತ್ತಿಗೆಗೆ ಚಾಕು ಇರಿದ ಆರೋಪಿ. ಪ್ರದೀಪ್ ತನ್ನ ಪತ್ನಿ ತಪಸ್ವಿನಿ ಜೊತೆ ಕುಡಿದ ಮತ್ತಿನಲ್ಲಿ ಜಗಳವಾಡುತ್ತಿದ್ದನು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮದ್ಯದ ಅಮಲಿನಲ್ಲಿ ಪ್ರದೀಪ್ ತನ್ನ ಪತ್ನಿಯ ಕುತ್ತಿಗೆಯನ್ನು ಚಾಕುವಿನಿಂದ ಇರಿದಿದ್ದಾನೆ.ಪ್ರದೀಪ್ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದು, ತಪಸ್ವಿನಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದಳು. ಹಣಕಾಸಿನ ವಿಚಾರಕ್ಕೆ ಪ್ರದೀಪ್, ತಪಸ್ವನಿಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಪಸ್ವಿನಿ ರಕ್ತದ ಮಡುವಿನಲ್ಲೇ ಅಣ್ಣನ ಮನೆ ಬಾಗಿಲು ತಟ್ಟಿದ್ದಾಳೆ.ಬಾಗಿಲು ತೆಗೆಯುತ್ತಿದ್ದಂತೆ ತಪಸ್ವಿನಿಯನ್ನು ನೋಡಿದ ಅವರ ಅಣ್ಣ ಪದ್ಮಲೋಷನ್ ಶಾಕ್ ಆದ್ದರು. ಬಳಿಕ ತಪಸ್ವಿನಿಯನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತು. ತಪಸ್ವಿನಿ ಈಗ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.ಈ ಬಗ್ಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


