ಬೆಂಗಳೂರು: ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಎಲ್ಲಿದ್ದಾನೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದ್ದ ಸುದ್ದಿ ನಿಜವಾಗಿದೆ.ಮನ್ಸೂರ್ ಖಾನ್ ವಿಮಾನದ ಮೂಲಕ ರಸ್-ಅಲ್-ಖೈಮಾ ಹೋಗಿದ್ದನು. ಈ ಎಲ್ಲ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ಖಚಿತಪಡಿಸಿಕೊಂಡು ಜೂನ್ 18 ರಂದೇ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈಗ ಮನ್ಸೂರ್ ಖಾನ್ ವಿದೇಶದಲ್ಲಿದ್ದುಕೊಂಡೇ ವಿಡಿಯೋ ರಿಲೀಸ್ ಮಾಡಿ ಸ್ಫೋಟಕ ಮಾಹಿತಿಗಳನ್ನು ತಿಳಿಸಿದ್ದಾನೆ.ಆರೋಪಿ ಮನ್ಸೂರ್ ಖಾನ್ ಬಗ್ಗೆ ರಾ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಅವನು ಎಲ್ಲೂ ಪರಾರಿಯಾಗುತ್ತಿಲ್ಲ, ದೇಶದಿಂದ ಮತ್ತೊಂದು ದೇಶಕ್ಕೆ ಹೋಗುವ ಪ್ರಯತ್ನ ಕೂಡ ಮಾಡುತ್ತಿಲ್ಲ. ಸದ್ಯದಲ್ಲಿಯೇ ಬೆಂಗಳೂರಿಗೆ ಕರೆತರಲು ತಯಾರಿ ನಡೆದಿದೆ. ಪೊಲೀಸರು ಬ್ಲೂಕಾರ್ನರ್ ನೋಟೀಸ್ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.ಮನ್ಸೂರ್ ಖಾನ್ ಮಾತನಾಡುತ್ತಿರುವ ವಿಡಿಯೋ ರಿಲೀಸ್ ಇಂದು ಆಗಿದ್ದು, ಈ ವಿಡಿಯೋದಲ್ಲಿ ತನ್ನ ಸಂಸ್ಥೆಯನ್ನು ಮುಚ್ಚಲು ಪ್ರಯತ್ನ ಪಟ್ಟಿದ್ದಕ್ಕೆ ರಾಜಕಾರಣಿಗಳು, ಉದ್ಯಮಿಗಳಿಗೆ ಮನ್ಸೂರ್ ಧನ್ಯವಾದ ತಿಳಿಸಿದ್ದಾನೆ.ವಿಡಿಯೋದಲ್ಲಿ ಹೇಳಿದ್ದೇನು?
ರಾಜ್ಯಸಭಾ ಮಾಜಿ ಸದಸ್ಯ ರೆಹಮಾನ್ ಖಾನ್, ಮೊಹಮದ್ ಉಬೇದುಲ್ಲಾ ಶರೀಫ್, ಪಾಸ್‍ಬನ್ ಪತ್ರಿಕೆ ಸಂಪಾದಕ ಶರೀಫ್, ಟಾಡಾ ಟೆರರಿಸ್ಟ್ ಮುಕ್ತಾರ ಅಹಮದ್, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ, ರಿಯಲ್ ಎಸ್ಟೇಟ್ ಉದ್ಯಮಿ ಫೈರೋಜ್ ಅಬ್ದುಲ್ಲಾ, ಪ್ರೆಸ್ಟೀಜ್ ಗ್ರೂಪ್ ಇರ್ಫಾನ್ ಸೇರಿ ನನ್ನನ್ನು ಮುಗಿಸಿದ್ದಾರೆ. ಐಎಂಎ ಮುಗಿಸಲು ಎಲ್ಲರೂ ಸಫಲರಾಗಿದ್ದಕ್ಕೆ ಅವರಿಗೆ ಧನ್ಯವಾದಗಳು.ರಾಜಕಾರಣಿಗಳು, ಹೂಡಿಕೆದಾರರು ನನ್ನ ಕುತ್ತಿಗೆ ಮೇಲೆ ಬಂದು ಕುಳಿತಿದ್ದರು. ಅವರಿಂದ ತಪ್ಪಿಸಿಕೊಳ್ಳಲು, ನನ್ನ ಸಹಾಯಕ್ಕೆ ಯಾರು ಇಲ್ಲದ ಕಾರಣ ನಾನು ಕುಟುಂಬದ ಜೊತೆ ಹೊರಡಬೇಕಾಯಿತು. ಜೂನ್ 24ರಂದು ಮರಳಿ ಬೆಂಗಳೂರಿಗೆ ಬರುವ ಪ್ಲಾನ್ ಮಾಡಿದ್ದೆ. ಆದರೆ ನನ್ನ ಪಾಸ್‍ಪೋರ್ಟ್, ಟಿಕೆಟ್ ತಡೆ ಹಿಡಿಯಲಾಯಿತು.ನಾನು ಭಾರತಕ್ಕೆ ಬಂದರೆ ಜೀವ ಬೆದರಿಕೆಯಿದೆ. ಪೊಲೀಸ್ ಕಸ್ಟಡಿಯಲ್ಲಿಯೇ ನನ್ನನ್ನು ಹೊಡೆದು ಹಾಕಲು ಕೆಲವರು ಸಂಚು ರೂಪಿಸಿದ್ದರು. ಹೀಗಾಗಿ ಕುಟುಂಬ ಸಮೇತ ಬೆಂಗಳೂರು ಬಿಟ್ಟು ಬಂದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದರೆ ನಾನು ಎದುರಿಸಲು ಸಿದ್ಧನಿದ್ದೇನೆ. ನಾನು ತಪ್ಪಿತಸ್ಥ ಎನ್ನುವುದಾದರೆ ನನ್ನ ಹಿಂದೆ ಅನೇಕರು ಇದ್ದಾರೆ. ಅವರಿಗೂ ಶಿಕ್ಷೆಯಾಗಲಿ ಎಂದು ಮನ್ಸೂರ್ ಖಾನ್ ಹೇಳಿದ್ದಾನೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


