ಬಳ್ಳಾರಿ: ಶನಿವಾರ ಡಿಕೆಶಿಯನ್ನ ಶಕುನಿಗೆ ಹೋಲಿಸಿದ್ದ ಶ್ರೀರಾಮುಲು ಇಂದು ಮೂರು ಸರಣಿ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.ಶಿವಕುಮಾರ್ ಅವರ ದಾಟಿಯಲ್ಲೇ ಶಿವಕುಮಾರ್ ಅಣ್ಣಾ ಎನ್ನುವ ಮೂಲಕ ಕಾಲೆಳೆದ ರಾಮುಲು, “ಶಿವಕುಮಾರ್ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಹೋಗುವ ನಿಮ್ಮನ್ನು ಜನ ಶಿವಕುಮಾರ್ ಎಲ್ಲಿದ್ದೀಯಪ್ಪ ಎನ್ನುತ್ತಿದ್ದಾರೆ. ಬಳ್ಳಾರಿಯ ಜನ ವಲಸೆ ಬಂದವರಿಗೆ ತಮ್ಮ ಸ್ವಾಭಿಮಾನದಿಂದ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಿದ್ದಾರೆ” ಎಂದು ಟಾಂಗ್ ಕೊಟ್ಟಿದ್ದಾರೆ.ಶಿವಕುಮಾರ್ ಅಣ್ಣನವರೇ, ನಾನು ಬಳ್ಳಾರಿಯ ಮಣ್ಣಿನ ಮಗ. ಚುನಾವಣೆ ಸಂದರ್ಭದಲ್ಲಿ ಮಾತ್ರ ಬಂದು ಹೋಗುವ ನಿಮ್ಮನ್ನು ಜನ ಶಿವಕುಮಾರ್ ಎಲ್ಲಿದ್ದೀಯಪ್ಪ ಎನ್ನುತ್ತಿದ್ದಾರೆ. ಬಳ್ಳಾರಿಯ ಜನ ವಲಸೆ ಬಂದವರಿಗೆ ತಮ್ಮ ಸ್ವಾಭಿಮಾನದಿಂದ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಿದ್ದಾರೆ.— B Sriramulu (@sriramulubjp) June 23, 2019ಎರಡನೇ ಟ್ವೀಟ್‍ನಲ್ಲಿ “ರಾಜ್ಯ ಕಾಂಗ್ರೆಸ್ ಅನ್ನು ಕುಮಾರಸ್ವಾಮಿಯವರ ಮೇಲಿನ ನಿಮ್ಮ ಕುರುಡು ಪ್ರೇಮಕ್ಕಾಗಿ ಒಂದಂಕಿಗೆ ಇಳಿಸಿದ ಕೀರ್ತಿ ನಿಮಗೆ ಸಲ್ಲಬೇಕು. ಬಳ್ಳಾರಿಯ ಜನರ ಪ್ರೀತಿಯ ಬಗ್ಗೆ ಮಾತನಾಡುವ ನೀವು, ಬಳ್ಳಾರಿಯ ಮಂತ್ರಿಗಳಿಗೆ ಯಾರಿಗಾದರೂ ಬಳ್ಳಾರಿಯ ಉಸ್ತುವಾರಿ ಸಚಿವರನ್ನಾಗಿ ಮಾಡಿ” ಎಂದು ಹೇಳಿದ್ದಾರೆ.ರಾಜ್ಯ ಕಾಂಗ್ರೆಸ್ ಅನ್ನು ಕುಮಾರಸ್ವಾಮಿಯವರ ಮೇಲಿನ ನಿಮ್ಮ ಕುರುಡು ಪ್ರೇಮಕ್ಕಾಗಿ ಒಂದಂಕಿಗೆ ಇಳಿಸಿದ ಕೀರ್ತಿ ನಿಮಗೇ ಸಲ್ಲಬೇಕು. ಬಳ್ಳಾರಿಯ ಜನರ ಪ್ರೀತಿಯ ಬಗ್ಗೆ ಮಾತನಾಡುವ ನೀವು ಬಳ್ಳಾರಿಯ ಮಂತ್ರಿಗಳಿಗೆ ಯಾರಿಗಾದರೂ ಬಳ್ಳಾರಿಯ ಉಸ್ತುವಾರಿ ಸಚಿವರನ್ನಾಗಿ ಮಾಡಿ.— B Sriramulu (@sriramulubjp) June 23, 2019“ಶುಭಮಹೂರ್ತ, ಶುಭ ಘಳಿಗೆಯಲ್ಲಾದರೂ ಇನ್ನು ಮುಂದೆ ಕೇವಲ ಚುನಾವಣಾ ಸಚಿವರಾಗದೇ ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ ಎಂದು ನಿಮ್ಮಲ್ಲಿ ಕಳಕಳಿಯ ಮನವಿಯನ್ನು ಮಾಡುತ್ತೇನೆ ಅಣ್ಣಾ” ಎಂದು ಕಾಲೆಳೆದಿದ್ದಾರೆ.ಶುಭಮಹೂರ್ತ, ಶುಭ ಘಳಿಗೆಯಲ್ಲಾದರೂ ಇನ್ನು ಮುಂದೆ ಕೇವಲ ಚುನಾವಣಾ ಸಚಿವರಾಗದೆ ಬಳ್ಳಾರಿ ಅಭಿವೃದ್ಧಿಗೆ ಶ್ರಮಿಸಿ ಎಂದು ನಿಮ್ಮಲ್ಲಿ ಕಳಕಳಿಯ ಮನವಿಯನ್ನು ಮಾಡುತ್ತೇನೆ ಅಣ್ಣ.— B Sriramulu (@sriramulubjp) June 23, 2019[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


