ಬೆಂಗಳೂರು: ಮೈತ್ರಿ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಅವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಎಂ ಕಚೇರಿಯಿಂದ ಲಭ್ಯವಾಗಿದೆ.ರಾಜ್ಯಪಾಲ ವಿ.ಆರ್.ವಾಲಾ ಅವರು ಬೆಂಗಳೂರಿನಿಂದ ಹೊರ ಇರುವ ಹಿನ್ನೆಲೆಯಲ್ಲಿ ಸೋಮವಾರ ಖಾತೆ ಹಂಚಿಕೆ ಆಗಲಿದೆ ಎಂಬ ಮಾಹಿತಿ ಲಭಿಸಿದ್ದು, ನಾಳೆ ವಾಲಾ ಅವರಿಂದ ನೂತನ ಸಚಿವರ ಖಾತೆಗಳ ಪಟ್ಟಿಗೆ ಅಂಕಿತ ಬೀಳಲಿದೆ. ಕುಂದಗೋಳ ಶಾಸಕ ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾಗಿರುವ ಪೌರಾಡಳಿತ ಇಲಾಖೆಯ ಜವಾಬ್ದಾರಿಯನ್ನು ಆರ್.ಶಂಕರ್ ಅವರಿಗೆ ವಹಿಸುವ ಸಾಧ್ಯತೆಗಳಿವೆ. ಬಹು ದಿನಗಳಿಂದ ಸಚಿವರಿಲ್ಲದೇ ಉಳಿದುಕೊಂಡಿರುವ ಶಿಕ್ಷಣ ಇಲಾಖೆಗೆ ಹೆಚ್.ನಾಗೇಶ್ ಅವರ ಪಾಲಾಗಲಿದೆ ಎಂದು ಹೇಳಲಾಗುತ್ತಿದೆ.ಜೂನ್ 14ರಂದು ಹಲವು ಗೊಂದಲಗಳ ನಡುವೆ ಪಕ್ಷೇತರರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪಕ್ಷೇತರರರಿಗೆ ಸಚಿವ ಸ್ಥಾನ ನೀಡಿದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಹಿರಿಯ ನಾಯಕರು ಮತ್ತು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಪಕ್ಷೇತರ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲಾಯ್ತು ಎಂಬ ಮಾತುಗಳು ಕೇಳಿ ಬಂದಿವೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


