ಚಿಕ್ಕಬಳ್ಳಾಪುರ: ದೇಶದಲ್ಲಿ ನಾಯಕತ್ವವೇ ಇಲ್ಲದ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.ಜಿಲ್ಲೆಯ ಚಿಂತಾಮಣಿಯಲ್ಲಿ ನಡೆಯುತ್ತಿರುವ ಕೋಲಾರ ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್.ಮುನಿಸ್ವಾಮಿಯಿಂದ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಸೇರಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಚ್ಚಾಟದಲ್ಲಿ ತೊಡಗಿದೆ ಎಂದು ಹೇಳಿದರು.ಕಾಂಗ್ರೆಸ್‍ನ ನಾಯಕಿ ಸೋನಿಯಾ ಗಾಂಧಿ ನಿವೃತ್ತಿ ಹೊಂದಿ ಆರೋಗ್ಯ ಸರಿ ಇಲ್ಲದೇ ಹಾಸಿಗೆ ಹಿಡಿದಿದ್ದಾರೆ. ನಂತರ ಪುತ್ರ ರಾಹುಲ್ ಗಾಂಧಿ ಅಧ್ಯಕ್ಷನಾಗಿ ಮಾಡಿದರು. ಆದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಸೋತಿದ್ದಾರೆ. ಈಗ ನೋಡಿದರೆ ನನಗೆ ಅಧ್ಯಕ್ಷ ಸ್ಥಾನ ಬೇಡ ಎನ್ನುತ್ತಿದ್ದಾರೆ. ಈಗ ಕಾಂಗ್ರೆಸ್ ಪಕ್ಷಕ್ಕೆ ನಾಯಕರೇ ಇಲ್ಲದಂತೆ ಆಗಿದ್ದು ಎಲ್ಲಾ ರಾಜ್ಯಗಳಲ್ಲೂ ಕಾಂಗ್ರೆಸ್ ಜಗಳವಾಡುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ನಶಿಸುತ್ತಿದೆ ಎಂದು ಹೇಳಿದರು.ಇದೇ ವೇಳೆ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿ, ಇಡೀ ದೇಶವೇ ಮೋದಿ ಕಡೆ ನೋಡುತ್ತಿದೆ. ಮನೆ ಮಠ ಇಲ್ಲದ ಅವರಿಗೇ ದೇಶವೇ ಮನೆಮಠವಾಗಿದೆ. ಇಡೀ ವಿಶ್ವದಲ್ಲಿ ನರೇಂದ್ರ ಮೋದಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


