ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕುನಿಯಿಂದ ನಾವು ಸೋತ್ತಿದ್ದೇವೆ ಎಂದು ಗೊತ್ತಾಯಿತು ಎಂದು ಶಾಸಕ ಶ್ರೀರಾಮುಲು ಅವರು ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಹೇಳದೆ ಟಾಂಗ್ ನೀಡಿದ್ದಾರೆ.ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲೇ ಇಂದು ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿ ಇಲ್ಲದ ಸ್ಥಿತಿಗೆ ತಲುಪಿದೆ. ಆದರೆ ಕೆಲ ನಾಯಕರು ಪ್ರಚಾರಕ್ಕೆ ಮಾತನಾಡುತ್ತಾ ನೆಗೆಟಿವ್ ಪಬ್ಲಿಸಿಟಿ ಪಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು.ಬಳ್ಳಾರಿ ಜಿಲ್ಲೆಯಲ್ಲಿ ಕೃಷ್ಣೆ ಬತ್ತಿ ಹೋಗಿದ್ದರೂ ಕೂಡ ಇದುವರೆಗೂ ಉಸ್ತುವಾರಿ ಸಚಿವರಾಗಿ ಒಮ್ಮೆಯೂ ಭೇಟಿ ನೀಡಿಲ್ಲ. ಜನರು ಕುಡಿಯಲು ನೀರು ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದರೆ ಇವರು ಇಲ್ಲಿ ಮಾತನಾಡುತ್ತಿದ್ದಾರೆ. ಬಳ್ಳಾರಿಯಲ್ಲಿ ನಾನೇ ಸುಪ್ರೀಂ ಎಂದು ಪೋಸ್ ಕೊಟ್ಟವರು ಮೂಲೆ ಸೇರಿದ್ದಾರೆ. ಉಸ್ತುವಾರಿ ಸಚಿವರು ಯಾವ ರೀತಿ ಕೆಲಸ ಮಾಡಿದ್ದಾರೆ ಗೊತ್ತಿದೆ ಎಂದರು.ಮಹಾಭಾರತದ ಕುರುಕ್ಷೇತ್ರದಲ್ಲಿ ಶಕುನಿಯಿಂದ ನಾವು ಸೋತಿದ್ದು ಎಂದು ಸೋತ ಬಳಿಕ ಕೌರವರಿಗೆ ತಿಳಿಯಿತು. ಕಾಂಗ್ರೆಸ್‍ಗೆ ಈಗ ಕೂಡ ಶಕುನಿ ಮಾತಿನಿಂದ ಸೋಲಾಗಿದೆ ಎಂದು ಗೊತ್ತಾಗಿದೆ. ಆದರೆ ಸಮ್ಮಿಶ್ರ ಸರ್ಕಾರ ಉರುಳಿ ಹೋದ ಬಳಿಕ ಕಾಂಗ್ರೆಸ್ ನಾಯಕರಿಗೆ ಶಕುನಿ ಮಾಮಾ ಯಾರು ಎಂಬ ಬಗ್ಗೆ ಜ್ಞಾನೋದಯ ಆಗುತ್ತೆ ಎಂದರು.ನಿನ್ನೆಯಷ್ಟೇ ಕುಂದಗೋಳದಲ್ಲಿ ಮಾತನಾಡಿದ್ದ ಸಚಿವ ಡಿಕೆ ಶಿವಕುಮಾರ್ ಅವರು, ತಮಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿ ಆಗಿದ್ದ ಕಾಂಗ್ರೆಸ್ ಶಾಸಕರು ಬಿಜೆಪಿ ಪಕ್ಷ ಸೇರಲು ಆಹ್ವಾನ ನೀಡಿದ್ದರು ಎಂದು ಪರೋಕ್ಷವಾಗಿ ಶ್ರೀರಾಮುಲು ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಇದೇ ರೀತಿ ಇಂದು ಶ್ರೀರಾಮುಲು ಅವರು ಕೂಡ ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಹೇಳದೆ ಟಾಂಗ್ ನೀಡಿದ್ದಾರೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


