ಶಿವಮೊಗ್ಗ: ಶರಾವತಿ ಹಿನ್ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿ ಸಂಸದ ಬಿ.ವೈ ರಾಘವೇಂದ್ರ ಅವರು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಉದ್ಧಾರವಾದರೆ ಸಾಕು ರಾಜ್ಯ ಉದ್ಧಾರವಾಗಲಿದೆ ಎಂಬ ಧೋರಣೆಯನ್ನು ರಾಜ್ಯ ಸರ್ಕಾರ ತಳೆದಿದೆ ಇದು ಸರಿಯಲ್ಲ. ಸರ್ಕಾರ ಪರಿಸರ ಉಳಿಸುವ ಯೋಜನೆ ರೂಪಿಸುವುದನ್ನು ಬಿಟ್ಟು ಈ ರೀತಿಯ ಯೋಜನೆ ಮಾಡಿರುವುದು ಸರಿಯಲ್ಲ. ಇಂತಹ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.ಶಿವಮೊಗ್ಗ ಜಿಲ್ಲೆಯಲ್ಲಿ ಕೈ ಹಿಡಿಯುತ್ತಿದ್ದ ಮುಂಗಾರು ಕ್ಷೀಣವಾಗಿದ್ದು, ಶೇ.70 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ಎಂದು ಮನವಿ ಮಾಡಿದರು. ಹಾಗೆಯೇ ಸರ್ಕಾರದಲ್ಲಿರುವ ಗೊಂದಲವನ್ನು ಬದಿಗಿಟ್ಟು ಈ ತೀರ್ಮಾನ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.ಶೋಚನೀಯ ಸ್ಥಿತಿ ಇರುವ ಸಂದರ್ಭದಲ್ಲಿ ಕೇವಲ ತೋರಿಕೆಗಷ್ಟೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹೋಗಿದ್ದಾರೆ ಎಂದು ಆರೋಪಿಸಿದರು.ಅಷ್ಟೇ ಅಲ್ಲದೆ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ ಅಲ್ಲೆಲ್ಲಾ ಬೋರ್ ಕೊರೆಸುವ ಕೆಲಸವಾಗಿದೆ. ಇದು ಇನ್ನಷ್ಟು ತ್ವರಿತಗತಿಯಲ್ಲಿ ಆಗಬೇಕು. ಯಾವುದೇ ಕಾರಣಕ್ಕೂ ಭದ್ರಾವತಿಯ ವಿಐಎಸ್‍ಎಲ್ ಮಾರಾಟಕ್ಕೆ ಅವಕಾಶವಿಲ್ಲ. ಕಾರ್ಖಾನೆ ಉಳಿಸುವಲ್ಲಿ ಶಕ್ತಿ ಮೀರಿ ಎಲ್ಲಾ ಪ್ರಯತ್ನ ಮಾಡಲಾಗಿದೆ. ದೇಶದಲ್ಲಿ ಸಾರ್ವಜನಿಕ ವಲಯದ 28 ನಷ್ಟದಲ್ಲಿರುವ ಕಾರ್ಖಾನೆಗಳ ಬಂಡವಾಳ ಹಿಂತೆಗೆಯುವಂತೆ ನೀತಿ ಆಯೋಗ ಶಿಫಾರಸ್ಸು ಮಾಡಿದೆ. ಆಯಾ ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರದ ಮೇಲೆ ಬಂಡವಾಳ ಹಿಂತೆಗೆಯದಂತೆ ಒತ್ತಡ ಹೇರುತ್ತಿದ್ದಾರೆ. ಹಾಗೆಯೇ ನಮ್ಮ ರಾಜ್ಯದಲ್ಲೂ ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಸಂಬಂಧಪಟ್ಟಂತೆಯೂ ಇದೆ ರೀತಿ ಒತ್ತಡ ಹೇರಿ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲಾಗುತ್ತಿದೆ ಎಂದು ಹೇಳಿದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


