ಬೆಂಗಳೂರು: ನಗರದ ನೂತನ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ನೈಟ್ ರೌಂಡ್ಸ್ ಹಾಕಿದ್ದಾರೆ. ಇತ್ತ ರಾತ್ರೋರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಪಬ್ ಮತ್ತು ಬಾರ್‌ಗಳಿಂದ ಶಬ್ಧ ಮಾಲಿನ್ಯ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಶಬ್ಧ ಮಾಲಿನ್ಯ ಮಾಪನದ ವಿಧಾನದಲ್ಲೇ ದೋಷ ಎಂದು ಹೈಕೋರ್ಟ್ ಕಿಡಿಕಾರಿತ್ತು. ಈ ಹಿನ್ನೆಲೆಯಲ್ಲಿ ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಚರ್ಚ್ ಸ್ಟ್ರೀಟ್ ಗೆ ದಿಢೀರ್ ಭೇಟಿ ಕೊಟ್ಟು, ಪಬ್ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ.ಪರವಾನಿಗೆ ಪಡೆಯದೆ ಡಿ.ಜೆ ಬಳಸುತ್ತಿದ್ದ ಪಬ್‍ಗಳಿಗೆ ನೋಟಿಸ್ ನೀಡಿದ್ದಾರೆ. ಜೂನ್ 26ರೊಳಗೆ ಹೈಕೋರ್ಟ್ ಗೆ ವರದಿ ಸಲ್ಲಿಸಲು ಗಡುವು ಇರುವ ಕಾರಣದಿಂದ ದಿಢೀರ್ ಭೇಟಿ ನೀಡಿ ಪಬ್‍ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಇತ್ತ ರಾತ್ರೋರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೆಜೆಸ್ಟಿಕ್‍ನ ಸಿಟಿ ಸೆಂಟರ್ ಬಳಿ ನಿಯಮಬಾಹೀರವಾಗಿ ನಡೆಯುತ್ತಿದ್ದ ಲೇಡಿಸ್ ಬಾರ್‌ಗಳ ಮೇಲೆ ದಾಳಿ ನಡೆಸಿದ್ದಾರೆ.ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ಮಾಲೀಕ ಲೇಡಿಸ್ ಬಾರ್ ನಡೆಸುತ್ತಿದ್ದನು. ನಿಯಮ ಉಲ್ಲಂಘಿಸಿ ಹೆಚ್ಚಿನ ಯುವತಿಯರಿಂದ ಸಮವಸ್ತ್ರ ಧರಿಸದೇ ಸರ್ವ್ ಮಾಡಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ, ಎಸಿಪಿ ರಾಮಚಂದ್ರಯ್ಯ, ಶೋಭಾ ಕಟವಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.36 ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ. ಅಲ್ಲದೆ 28 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಒಂದು ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಈ ಕುರಿತು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


