ಬೆಂಗಳೂರು: ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಡೆದಿದೆ.ಗೀತಾ ಮೃತ ಯುವತಿ. ಗೀತಾ ಗೋಲ್ಡನ್ ಸಿಮ್ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮೂಲತಃ ಶಿವಮೊಗ್ಗದ ಸಾಗರದ ನಿವಾಸಿಯಾಗಿದ್ದು, ಕಳೆದ ಎರಡು ವರ್ಷಗಳಿಂದ ವಿಕಾಸ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ವಿಕಾಸ್ ಕೂಡ ಅದೇ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದನು. ಅಷ್ಟೇ ಅಲ್ಲದೇ ವಿಕಾಸ್ ಮತ್ತು ಗೀತಾ ಎರಡು ವರ್ಷಗಳಿಂದ ಲಿವಿಂಗ್ ಟುಗೆದರ್‌ನಲ್ಲಿದ್ದ ಇದ್ದರು. ಆದರೆ ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದಾಳೆ.ಮದುವೆಯ ವಿಚಾರವಾಗಿ ವಿಕಾಸ್ ಮತ್ತು ಗೀತಾ ನಡುವೆ ಜಗಳವಾಗಿತ್ತು. ಎರಡು ವರ್ಷ ಪ್ರೀತಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದನು. ಈಗ ಗೀತಾಳನ್ನ ಮದುವೆಯಾಗಲು ವಿಕಾಸ್ ನಿರಾಕರಣೆ ಮಾಡಿದ್ದನು. ಇದೇ ವಿಚಾರವಾಗಿ ಪದೇ ಪದೇ ಇಬ್ಬರು ಜಗಳವಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ತಾನು ಬೇರೆ ಯುವತಿಯನ್ನ ಮದುವೆಯಾಗುವುದಾಗಿ ವಿಕಾಸ್ ಹೇಳಿದ್ದನು. ಈಗ ಇದೇ ವಿಚಾರಕ್ಕೆ ಗೀತಾಳನ್ನ ವಿಕಾಸ್ ಕೊಲೆ ಮಾಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ.ಈ ಕುರಿತು ಪೋಷಕರು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವುದಾಗಿ ದೂರು ನೀಡಿದ್ದಾರೆ. ಈ ಹಿಂದೆ ಮನೆ ಕಟ್ಟಲು ಗೀತಾಳ ಬಳಿ ವಿಕಾಸ್ ಮೂರು ಲಕ್ಷ ಹಣ ಪಡೆದುಕೊಂಡಿದ್ದನು ಎಂದು ತಿಳಿದು ಬಂದಿದೆ. ಸದ್ಯಕ್ಕೆ ವಿಕಾಸ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಆರೋಪಿಯನ್ನ ಕರೆತಂದು ವಿಚಾರಣೆ ಮಾಡದೆ ಪೊಲೀಸರು ಹಣ ಪಡೆದುಕೊಂಡು ಬಿಟ್ಟು ಕಳುಹಿಸಲಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಸದ್ಯಕ್ಕೆ ಯುವತಿಯ ಮೃತ ದೇಹ ಮರಣೋತ್ತರ ಪರೀಕ್ಷೆಗೆಂದು ನೆಲಮಂಗಲ ಆಸ್ಪತ್ರೆಗೆ ರವಾನಿಸಲಾಗಿದೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


