ಬೆಳಗಾವಿ: ಕಳೆದ ದಿನ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಧಾರಾಕಾರ ಮಳೆಯಾಗಿದ್ದು, ಪರಿಣಾಮ ನೀರಿನ ರಭಸಕ್ಕೆ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಏರಿ ಕಿತ್ತೂರ್ ಗ್ರಾಮದಲ್ಲಿ ನಡೆದಿದೆ.ರೇಣುಕಾ ಚಿಂತಲ್ ಮೃತ ದುರ್ದೈವಿ. ಗುರುವಾರ ಸಂಜೆ ಹಳ್ಳದಲ್ಲಿ ನೀರಿಲ್ಲ ಎಂದು ಕಟ್ಟಿಗೆ ತರಲು ಹಳ್ಳಕ್ಕೆ ಹೋಗಿದ್ದರು. ಈ ವೇಳೆ ಏಕಾಏಕಿ ಹಳ್ಳಕ್ಕೆ ನೀರು ಬಂದಿದ್ದು, ರೇಣುಕಾ ಅವರು ನೀರಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ. ಗ್ರಾಮದ ಹೊರ ವಲಯದಲ್ಲಿ ಮೃತ ರೇಣುಕಾ ಶವ ಪತ್ತೆಯಾಗಿದೆ.ಈ ಘಟನೆ ಸುರೇಬಾನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ದಿನ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಧಾರಕಾರ ಮಳೆಯಾಗಿ ಭಕ್ತರು ಪರದಾಡುವಂತಾಗಿತ್ತು. ಸತತ ಎರಡು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ದೇವಸ್ಥಾನದ ಸುತ್ತಮುತ್ತ ಭಾರೀ ಪ್ರಮಾಣದ ನೀರು ಹರಿದು ಬಂದಿತ್ತು.ಮಳೆಯಿಂದ ಭಕ್ತರು ಹಾಗೂ ಸಿಬ್ಬಂದಿ ಆತಂಕದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನೂ ಯಲ್ಲಮ್ಮನ ಗುಡ್ಡ ಸೇರಿದಂತೆ ಇಡೀ ತಾಲೂಕಿನಾದ್ಯಂತ ಮಳೆಯಾಗಿದ್ದಕ್ಕೆ ರೈತರು ಸಂತಸ ಪಟ್ಟಿದ್ದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


