ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.https://www.instagram.com/p/By7NJYNgvw4/ಇತ್ತೀಚೆಗಷ್ಟೆ ದೀಪಿಕಾ ತಮ್ಮ ಗೆಳೆಯನನ್ನು ಪರಿಚಯಿಸಿದ್ದರು. ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸುತ್ತಿರುವ ಅಕ್ಕು ಅಕರ್ಶ್ ಅವರನ್ನು ದೀಪಿಕಾ ಬಹಳ ದಿನದಿಂದಲೂ ಪ್ರೀತಿ ಮಾಡುತ್ತಿದ್ದಾರೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


