ಹುಬ್ಬಳ್ಳಿ: ದೇವಸ್ಥಾನದಲ್ಲಿ ದೇವರಿಗೆ ಕೈ ಮುಗಿಯುವ ವೇಳೆ ಮಹಿಳೆಯೊಬ್ಬರ ಸೀರೆಗೆ ಬೆಂಕಿ ಹತ್ತಿಕೊಂಡ ಘಟನೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ದೇವಸ್ಥಾನದಲ್ಲಿ ನಡೆದಿದೆ.ಈ ಘಟನೆ ಜೂನ್ 17ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ದೇವಸ್ಥಾನಕ್ಕೆ ತೆರಳಿದ್ದ ಮಹಿಳೆ ದೇವಸ್ಥಾನದಲ್ಲಿರುವ ನಾಗರಕಟ್ಟೆಗೆ ಬಾಗಿ ನಮಸ್ಕರಿಸಿ ಹಿಂದಿರುಗುತ್ತಿದ್ದ ವೇಳೆ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ. ಈ ಎಲ್ಲಾ ದೃಶ್ಯಗಳು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ವಿಡಿಯೋದಲ್ಲೇನಿದೆ?
ಮಹಿಳೆ ದೇವರಿಗೆ ಕೈ ಮುಗಿದು ಹಿಂದಿರುಗುತ್ತಿದ್ದರು. ಈ ವೇಳೆ ಏಕಾಏಕಿ ಅವರ ಸೀರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಮಹಿಳೆ ಕಿರುಚಾಡುತ್ತಾ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮಹಿಳೆಯ ಚೀರಾಟ ಕೇಳಿದ ಸ್ಥಳದಲ್ಲಿರುವ ತಕ್ಷಣವೇ ಮಹಿಳೆಯ ಬಳಿ ಓಡಿ ಬಂದು, ಕಷ್ಟಪಟ್ಟು ಬೆಂಕಿ ನಂದಿಸಿದ್ದಾರೆ. ನಂತರ ಮಹಿಳೆಯನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಈ ದೃಶ್ಯ ಇದೀಗ ವೈರಲ್ ಆಗಿದ್ದು, ಹೀಗಾಗಿ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


