ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ನುಗ್ಗೆಕಾಯಿ ಗಿಡ ಇದ್ದಂತೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಸಹವಾಸ ಮಾಡಿರುವ ಕಾಂಗ್ರೆಸ್ ಧೂಳಿಪಟವಾಗಿದೆ. ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದರು. ಆದರೆ ಈಗ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರನ್ನೇ ಏಕವಚನದಲ್ಲಿ ಕರೆಯುವ ಸ್ಥಿತಿ ಬಂದಿದೆ. ಹೀಗಾಗಿ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಸ್ಥಿತಿ ಅತಂತ್ರವಾಗಿದೆ ಎಂದು ಹೇಳಿದರು.ಕಾಂಗ್ರೆಸ್‍ನಲ್ಲಿ ಗುಂಪುಗಾರಿಕೆ ಆರಂಭವಾಗಿದ್ದು, ಒಡೆದು ಮಣ್ಣು ಪಾಲಾಗುವುದು ಖಚಿತ. ಆಪರೇಷನ್ ಕಮಲದ ಬಗ್ಗೆ ಸಿಎಂ ಆರೋಪ ಮಾಡುತ್ತಾರೆ. ಬಿಜೆಪಿ ಯಾವುದೇ ಆಪರೇಷನ್ ಮಾಡುತ್ತಿಲ್ಲ. ಈ ರೀತಿ ಆರೋಪ ಮಾಡುವ ಬದಲು ಬರ ಸಮಸ್ಯೆ ಬಗ್ಗೆ ಗಮನ ಹರಿಸಲಿ. ಆರೋಪ ಮಾಡುವುದು ಸಿಎಂ ಚಟವಾಗಿಬಿಟ್ಟಿದೆ ಎಂದು ಕಿಡಿಕಾರಿದರು.ಮೈತ್ರಿ ಸರ್ಕಾರದಲ್ಲಿ ಹೊಸ ಸಚಿವರಿಗೆ ಖಾತೆ ಕೊಡದೇ ಕ್ಯಾತೆ ಮಾಡುತ್ತಿದ್ದಾರೆ. ಅಧಿವೇಶನ ಕರೆದರೆ ಚರ್ಚಿಸಲು ಬೇಕಾದಷ್ಟು ಜ್ವಲಂತ ಸಮಸ್ಯೆಗಳಿವೆ ಎಂದು ಹೇಳಿದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


