ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಅವರು ಈಗ ಎಲ್ಲಿದ್ದಾರೆ ಎಂಬುದು ಎಲ್ಲರಿಗೂ ಕತೂಹಲ. ಆದರೆ ರಮ್ಯಾ ಅವರು ಒಂದು ತಿಂಗಳ ಮಟ್ಟಿಗೆ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.ಇಂದು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಮ್ಯಾ ಅವರು ಆಕ್ಟೀವ್ ಆಗಿಲ್ಲ ಅನ್ನೋದಕ್ಕೆ ಯಾವುದೇ ಸಾಕ್ಷಿಯಿಲ್ಲ. ಅವರು ಬಹಳ ಸಕ್ರಿಯವಾಗಿ ರಾಜಕೀಯ ಹಾಗೂ ಪಕ್ಷ ಸಂಘಟನೆಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿಕೊಂಡು ಯಶಸ್ವಿಯಾಗಿದ್ದರು. ಕಳೆದ ಬಾರಿ ಬಹಳಷ್ಟು ಟಾರ್ಗೆಟ್ ಮಾಡಿ ಬಿಜೆಪಿ ವೈಫಲ್ಯಗಳನ್ನು ತೋರಿಸುವ ಮೂಲಕ ಹೆಚ್ಚು ಕೆಲಸ ಮಾಡಿದ್ದರು ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದರು.ರಮ್ಯಾ ಅವರು 8 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪ ಸುಳ್ಳಾಗಿದೆ. ಅಂತಹ ಸಂದರ್ಭ ಬಂದಿರಲು ಸಾಧ್ಯವೇ ಇಲ್ಲ ಎಂದು ನಾನು ಅಂದುಕೊಳ್ಳುತ್ತೇನೆ. ಹೀಗಾಗಿ ವಿಚಾರ ಗೊತ್ತಿಲ್ಲದೇ ಅದರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಆರೋಪ ನಿಜ ಆದರೆ ಸಾಕ್ಷಿಗಳನ್ನು ಕೊಡಲಿ. ಸುಮ್ಮನೆ ಗಾಳಿ ಸುದ್ದಿ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.ರಮ್ಯಾ ಅವರೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು ಕೂಡ. ದೆಹಲಿಗೆ ಹೋದಾಗ ನಾನು ಅವರನ್ನು ಭೇಟಿ ಮಾಡುತ್ತೇನೆ. ಅವರೊಬ್ಬರು ಕಾರ್ಯಕರ್ತರಾಗಿ ಏನು ಕೆಲಸ ಮಾಡಬೇಕೋ ಅದನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿದ್ದಾರೆ ಅಂದ್ರು. ಇದನ್ನೂ ಓದಿ: ಎಲೆಕ್ಷನ್ ಸಮೀಕ್ಷೆಗೆ ರಾಹುಲ್ ಗಾಂಧಿಯಿಂದ 24 ಕೋಟಿ ವಸೂಲಿ?– ರಮ್ಯಾ ಕೂಡ 8 ಕೋಟಿ ಪಡೆದುಕೊಂಡ್ರಾ?ಚುನಾವಣೆಯ ಬಳಿಕ ನಾನು ಅವರನ್ನು ಮಾತಾಡಿಸಿಲ್ಲ. ಯಾಕಂದರೆ ಚುನಾವಣೆಯ ಬಳಿಕ ಎಲ್ಲರೂ ಸ್ವಲ್ಪ ರಿಲ್ಯಾಕ್ಸ್ ಆಗಿದ್ದೇವೆ. ಸುಮಾರು 6 ತಿಂಗಳಿಂದ ನಿರಂತರವಾಗಿ ನಾನು ಕೂಡ ಎಲ್ಲಾ ಜಿಲ್ಲೆಗಳನ್ನು ಭೇಟಿ ಮಾಡಿಕೊಂಡು ಬಂದಿದ್ದೇನೆ. 28 ಜಿಲ್ಲೆ ಭೇಟಿ ಮಾಡಿದ್ದು, ಇನ್ನೂ 2 ಜಿಲ್ಲೆಗೆ ಹೋಗೋದು ಬಾಕಿ ಇದೆ ಎಂದರು.ಚುನಾವಣೆಯಲ್ಲಿ ಹಿನ್ನಡೆಯಾಗಿರುವುದು ನಿಜ. ಆದರೆ ಜನ ನಮ್ಮನ್ನು ದೂರ ಮಾಡಿಲ್ಲ ಎಂಬ ನಂಬಿಕೆ ಹಾಗೂ ವಿಶ್ವಾಸದಿಂದ ಮತ್ತೆ ಕೆಲಸ ಮಾಡುತ್ತೇವೆ. ಚುನಾವಣೆಯ ಸಂದರ್ಭದಲ್ಲಿ ರಮ್ಯಾ ಅವರು ದಿನದ 24 ಗಂಟೆಯೂ ಸಾಮಾಜಿಕ ಜಾಲತಾಣದ ತಂಡ ಕೆಲಸ ಮಾಡಿತ್ತು. ಪಕ್ಷದ ಐಟಿ ಟೀಂನ ಎಲ್ಲಾ ಸದಸ್ಯರು ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಯಾವಾಗಲೂ ಎಚ್ಚರಿಕೆಯಿಂದಿದ್ದು, ವಿರೋಧ ಪಕ್ಷದವರು ಏನು ಹೇಳಿಕೆಗಳನ್ನು ಕೊಡುತ್ತಾರೆ ಎಂಬುದರ ಬಗ್ಗೆಯೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದ್ದಾರೆ. ಹೀಗಾಗಿ ಸ್ವಲ್ಪ ಅವರಿಗೂ ವಿಶ್ರಾಂತಿ ಬೇಕು ಅಂತ ಅನಿಸಿರುತ್ತದೆ. ಮತ್ತೆ ಸಾಮಾಜಿಕ ಜಾಲತಾಣ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.biskuht.com/wp-content/plugins/wonderplugin-video-embed/engine/playvideo-64-64-0.png”]Sign in to your account
Username or Email Address


Password

 Remember Me


