ಕಲಬುರಗಿ: ಜಿಲ್ಲಾಸ್ಪತ್ರೆ ಹಾಗೂ ಜಯದೇವ ಹೃದ್ರೋಗ ಆಸ್ಪತ್ರಗೆ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಆಸ್ಪತ್ರೆಯಲ್ಲಿನ ಮೂಲಭೂತ ಸೌಲಭ್ಯಗಳು ಹಾಗೂ ಪ್ರತಿ ವಾರ್ಡ್ ನಲ್ಲಿಯೂ ಸ್ವಚ್ಛತೆ ಜೊತೆಗೆ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ತರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಸ್ಪತ್ರೆಯ ಸರ್ಜನ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಶಿವಾನಂದ್ ಪಾಟೀಲ್ ಸೂಚನೆ ನೀಡಿದರು.ಇದೇ ವೇಳೆ ಮಾತನಾಡಿದ ಅವರು, ಕಲಬುರಗಿ ಜಿಲ್ಲಾಸ್ಪತ್ರೆ ಅಲ್ಲದೇ ರಾಜ್ಯ ಸೇರಿದಂತೆ ದೇಶಾದ್ಯಂತ ರೇಬಿಸ್ ಔಷಧ ಕೊರತೆಯಿದೆ. ರೇಬಿಸ್ ಔಷಧ ಕೊರತೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ವಿವರಣೆ ಕೇಳಿದೆ. ಅಲ್ಲದೇ ಅಗತ್ಯಕ್ಕೆ ತಕ್ಕಂತೆ ರೇಬಿಸ್ ಔಷಧ ಪೂರೈಕೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಹೇಳಿದ್ದಾರೆ.Sign in to your account
Username or Email Address


Password

 Remember Me


