ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಚಂಗಡಳ್ಳಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ.ಚಂಗಡಹಳ್ಳಿ ಚಂದ್ರ ಪುತ್ರಿ ಬಾನುಮತಿ (25) ಸಾವು. ಪತಿ ಮೋಹನ್ ಮನೆಯಲ್ಲಿ ಸೋಮವಾರ ನೇಣುಬಿಗಿದ ಸ್ಥಿತಿಯಲ್ಲಿ ಬಾನುಮತಿ ಪತ್ತೆಯಾಗಿದ್ದಾಳೆ. ಕೂಡಲೇ ಮನೆಯವರು ನೋಡಿ ಶನಿವಾರಸಂತೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಬಾನುಮತಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಮೃತ ಬಾನುಮತಿ ಪೋಷಕರು ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತ ಚಂಗಡಳ್ಳಿ ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದರು.ಅಷ್ಟೇ ಅಲ್ಲದೆ ತಹಶೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ತಹಶೀಲ್ದಾರ್ ಸಮಯಕ್ಕೆ ಸರಿಯಾಗಿ ಬಾರದ ಕಾರಣ ಮರಣೋತ್ತರ ಪರೀಕ್ಷೆಗೂ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


