ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಪತಿಯೇ ಪತ್ನಿಯನ್ನು ಕತ್ತು ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿ ನಡೆದಿದೆ.ಕೊಲೆಯಾದ ಗೃಹಿಣಿಯನ್ನು 30 ವರ್ಷದ ಹೀನಾಕೌಸರ ದೇವಿಹೊಸೂರು ಎಂದು ಗುರುತಿಸಲಾಗಿದ್ದು, 35 ವರ್ಷದ ಮುಸ್ತಾಕ್ ಅಹಮ್ಮದ್ ಹತ್ಯೆ ಮಾಡಿದ ಪಾಪಿ ಪತಿ.ಕ್ಷುಲ್ಲಕ ಕಾರಣಕ್ಕೆ ಪತಿ ಪತ್ನಿ ನಡುವೇ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಸ್ಥಿಮಿತ ಕಳೆದುಕೊಂಡ ಮುಸ್ತಾಕ್ ಪತಿಯ ಕತ್ತು ಕಡಿದು ಕೊಲೆ ಮಾಡಿದ್ದಾನೆ. ಆರೋಪಿ ಪತಿ ಮುಸ್ತಾಕ್ ಅಹಮ್ಮದ್ ಪೊಲೀಸರ ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್.ಪಿ ಮಲ್ಲಿಕಾರ್ಜುನ, ಸಿಪಿಐ ಭಾಗ್ಯವಂತಿ ಹಾಗೂ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನೂ ಸ್ಥಳದಲ್ಲಿ ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಕಾಗಿನೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


