ಮೈಸೂರು: ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಆಕ್ಷೇಪ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ ಮಹೇಶ್, ಯಾರವರು? ಹರ್ಷಿಕಾ ಪೂಣಚ್ಚ ಏನಾಗಿದ್ದಾರೆ?. ಅವರೇನು ಸಿನಿಮಾ ನಟಿನಾ? ಸಿನಿಮಾ ನಟಿ ಆದರೆ ಅವರು ಸಿನಿಮಾ ಬಗ್ಗೆ ಮಾತ್ರ ಮಾತನಾಡಬೇಕು. ಅದನ್ನು ಬಿಟ್ಟು ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾ ಪೂಣಚ್ಚ ಅವರಿಗೆ ಏನು ಗೊತ್ತು? ಅವರ ವಿದ್ಯಾಭ್ಯಾಸ ಹಿನ್ನೆಲೆ ಏನು?. ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಪೂಣಚ್ಚ ವಿರುದ್ಧ ಸಚಿವರು ಕಿಡಿಕಾರಿದ್ದಾರೆ.ಹರ್ಷಿಕಾ ಹೇಳಿದ್ದೇನು?:
ಶನಿವಾರ ಮೈಸೂರಿನಲ್ಲಿ ಮಾತನಾಡಿದ್ದ ಸ್ಯಾಂಡಲ್‍ವುಡ್ ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ, ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.ಅಲ್ಲದೆ ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದರು.Sign in to your account
Username or Email Address


Password

 Remember Me


