ಹುಬ್ಬಳ್ಳಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಗಳ ನಡುವೆ ಘರ್ಷಣೆ ನಡೆದಿದ್ದು, ಮಾಜಿ ಮೇಯರ್ ಸೇರಿದಂತೆ ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿರುವ ಘಟನೆ ಹುಬ್ಬಳ್ಳಿಯ ತೊರವಿಹಕ್ಕಲ್‍ದಲ್ಲಿ ನಡೆದಿದೆ.ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕಮರಿಪೇಟ್‍ನಲ್ಲಿ ಮಾಜಿ ಮೇಯರ್ ವೆಂಕಟೇಶ ಮೇಸ್ತ್ರಿ ಗುಂಪು ಹಾಗೂ ಅವರ ಸಮುದಾಯದ ಇನ್ನೊಂದು ಗುಂಪಿನ ಮಧ್ಯೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ನಾಲ್ಕೈದು ಬೈಕ್‍ಗಳು ಜಖಂಗೊಂಡಿದ್ದು, ಐದಾರು ಜನರಿಗೆ ಪೆಟ್ಟು ಬಿದ್ದಿದೆ.ಕಮರಿಪೇಟ್‍ನಲ್ಲಿನ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ 10-15 ವರ್ಷಗಳಿಂದ ಈ ಗುಂಪುಗಳ ಮಧ್ಯೆ ವಿವಾದವಿತ್ತು. ಈ ವಿಷಯ ಈಗಾಗಲೇ ನ್ಯಾಯಾಲಯ ಮೆಟ್ಟಿಲೇರಿದೆ. ಆಗಾಗ ಎರಡು ಗುಂಪುಗಳ ನಡುವೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆಯುತ್ತಿತ್ತು. ಕಳೆದ ಎರಡು ದಿನಗಳ ಹಿಂದೆ ಇವರ ನಡುವೆ ಗಲಾಟೆ ನಡೆದಿತ್ತು.ಈ ವಿಚಾರವನ್ನು ಮರು ಪ್ರಶ್ನಿಸಲು ಶುಕ್ರವಾರ ಒಂದು ಗುಂಪು ತೊರವಿಹಕ್ಕಲದಲ್ಲಿ ರಾತ್ರಿ ಆಗಮಿಸಿತ್ತು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಮಾರಾಮಾರಿ, ಕಲ್ಲು ತೂರಾಟ ನಡೆದಿದೆ. ಪೊಲೀಸರ ಸಮ್ಮುಖದಲ್ಲಿ ಗಲಾಟೆ ನಡೆದರೂ ಪೊಲೀಸರು ಮಾತ್ರ ಮೂಖ ಪ್ರೇಕ್ಷಕರಾಗಿದ್ದರು.ಈ ಘಟನೆಯಲ್ಲಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಈ ಕುರಿತು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


