ಚಿಕ್ಕೋಡಿ/ಬೆಳಗಾವಿ: ದುಷ್ಕರ್ಮಿಗಳು 18 ವರ್ಷದ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಗವಾಣಿ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.ನಿಪ್ಪಾಣಿ ಪಟ್ಟಣದ ಹೊರ ವಲಯದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಇಂದು ಗ್ರಾಮಸ್ಥರು ಓಡಾಡುವಾಗ ಯುವತಿಯ ಮೃತ ದೇಹ ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಯುವತಿಯ ಮೃತ ದೇಹದ ಸ್ಥಳದಲ್ಲಿ ಮದ್ಯದ ಬಾಟಲಿಗಳು ದೊರೆತಿದ್ದು, ಯುವಕರ ಗುಂಪೊಂದು ಕುಡಿದ ಮತ್ತಿನಲ್ಲಿ ಯುವತಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಸದ್ಯಕ್ಕೆ ಇನ್ನು ಕೊಲೆಯಾಗಿರುವ ಯುವತಿಯ ಗುರುತು ಪತ್ತೆಯಾಗಿಲ್ಲ.ಈ ಕುರಿತು ನಿಪ್ಪಾಣಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುರಿಸಿದ್ದಾರೆ.Sign in to your account
Username or Email Address


Password

 Remember Me


