ಮಂಗಳೂರು: ಚಕ್ರವರ್ತಿ ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮಾನಾಥ್ ರೈಗೆ ಕೋರ್ಟ್ ಸಮನ್ಸ್ ನೀಡಿದೆ.ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಸೈಗೋಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ರಮಾನಾಥ ರೈ, ಸೂಲಿಬೆಲೆಯವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ, ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರು ರೈ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮಂಗಳೂರು ಜೆಎಂಎಫ್ ಸಿ ಕೋರ್ಟ್ ಮೆಟ್ಟಿಲೇರಿದ್ದರು.ಈ ಹಿನ್ನೆಲೆಯಲ್ಲಿ ಇಂದು ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ರಮಾನಾಥ್ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ. ಅಲ್ಲದೆ ಕೋರ್ಟಿಗೆ ಹಾಜರಾಗುವಂತೆ ರಮನಾಥ ರೈ ಅವರಿಗೆ ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರೈ ವಿರುದ್ಧ ಕೊಣಾಜೆ ಪೊಲೀಸರು ಐಪಿಸಿ ಸೆಕ್ಷನ್ 500 (ಮಾನಹಾನಿ) ಮತ್ತು 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 






 Advertisement 




Sign in to your account
Username or Email Address


Password

 Remember Me


