ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದ್ದು, ಇದರಿಂದ ಇಲ್ಲಿನ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಟಿ.ಜಿ.ದೊಡ್ಡಿ, ಆರ್ ಬಿ ತಾಂಡದ ಗ್ರಾಮದ ಜಾಗೇರಿ ತಾಂಡ ಜನಾಂಗದ 450ಕ್ಕೂ ಹೆಚ್ಚು ಜನರಿಗೆ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಮೊದಲಿಗೆ ತಲೆ ನೋವು, ಜ್ವರ, ಕೀಲು ನೋವು, ತಲೆ ಸುತ್ತು ಕಾಣಿಸಿಕೊಂಡು ಸುಸ್ತಿನಿಂದ ಇಲ್ಲಿನ ಜನ ಬಳಲುತ್ತಿದ್ದಾರೆ.ಜನರು ಆಸ್ಪತ್ರೆಗೆ ಹೋದರೆ ಇದು ಯಾವ ಕಾಯಿಲೆ ಎಂದು ವೈದ್ಯರು ಹೇಳುತ್ತಿಲ್ಲ. ವೈದ್ಯರು ಕೊಡುವ ಔಷಧಿಯನ್ನು ತೆಗೆದುಕೊಂಡರೂ ಕಾಯಿಲೆ ಮಾತ್ರ ಗುಣ ಮುಖವಾಗುತ್ತಿಲ್ಲ. ಹೀಗಾಗಿ ಸದ್ಯ ಇಲ್ಲಿನ ಜನ ಆಸ್ಪತ್ರೆಗೂ ಹೋಗದ ಸ್ಥಿತಿ ನಿರ್ಮಾಣವಾಗಿದೆ.ಈ ಬಗ್ಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಆರ್.ನರೇಂದ್ರಗೆ ತಿಳಿಸಿದರೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತು ಕತೆ ನಡೆಸಿಲ್ಲ. ಹೀಗಾಗಿ ಇಲ್ಲಿನ ಜನ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.Sign in to your account
Username or Email Address


Password

 Remember Me


