ಕಾರವಾರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದಿದೆ.ಈ ಅಪಘಾತ ಆಂದ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸುಗಮಾ ಟ್ರಾವೆಲ್ಸ್ ಬಸ್ ಬೆಂಗಳೂರಿನಿಂದ ಗೋವಾಕ್ಕೆ ಹೋಗುತಿತ್ತು, ಲಾರಿ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಅಂಕೋಲಾ ತಾಲೂಕಿನ ಆಂದ್ಲೆ ಬಳಿ ವೇಗವಾಗಿ ಬಂದು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ.ಅಪಘಾತದ ರಭಸಕ್ಕೆ ಚಾಲಕ ಬಸ್‍ನಲ್ಲೇ ಸಿಲುಕಿಕೊಂಡಿದ್ದು, ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸದ್ಯ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


