ಮಂಡ್ಯ: ಜಿಲ್ಲೆಯ ಪಾಂಡವಪುರ ಕನಗನಮರಡಿನಲ್ಲಿ ಸಂಭವಿಸಿದ್ದ ಭೀಕರ ಬಸ್ ದುರಂತದಲ್ಲಿ 30 ಜನರು ಮೃತಪಟ್ಟಿದ್ದರು. ಇದೀಗ ಮೃತಪಟ್ಟ 30 ಮಂದಿಯ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ.ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಿಸಿರುವುದಕ್ಕೆ ರಾಜ್ಯದ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.The Government of Karnataka had given a compensation of RS.5 lakh each to the kin of the deceased in the bus accident, Kanaganamaradi, Mandya. The Government of India has also given Rs 2 lakh each to them now. I thank PM @narendramodi for this kind gesture.— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 11, 2019“ಕರ್ನಾಟಕ ಸರ್ಕಾರ ಮಂಡ್ಯ ಕನಗನಮರಡಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ 5 ಲಕ್ಷ ರೂ. ಪರಿಹಾರ ನೀಡಿತ್ತು. ಈಗ ಭಾರತ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ನೀಡಿದೆ. ಹೀಗಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು” ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ಸುಮಲತಾ ಅವರು, “ಮೃತ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ. ಅಂದಿನ ದುರ್ಘಟನೆ ಎಲ್ಲರಿಗೂ ನೋವುಂಟು ಮಾಡಿತ್ತು. ಒಟ್ಟಿನಲ್ಲಿ ಮಂಡ್ಯ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಕ್ಕಾಗಿ ಮೋದಿಜೀ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.ಕನಗನಮರಡಿ ಬಳಿ ಖಾಸಗಿ ಬಸ್ ಸುಮಾರು 15 ಅಡಿ ಆಳದ ವಿಸಿ ನಾಲೆಗೆ ಉರುಳಿದ ಪರಿಣಾಮ ಮಕ್ಕಳು ಸೇರಿದಂತೆ 30 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಆಗ ಕರ್ನಾಟಕ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಈಗ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಇದೀಗ ಸಂತ್ರಸ್ತೆ ಕುಟುಂಬದವರಿಗೆ ಒಟ್ಟು 7 ಲಕ್ಷ ರೂ. ಪರಿಹಾರ ಸಿಕ್ಕಿದಂತಾಗಿದೆ.Sign in to your account
Username or Email Address


Password

 Remember Me


