ಬೀದರ್: ಐತಿಹಾಸಿಕ ಪಾಪನಾಶ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್‍ನಲ್ಲಿ ನಡೆದಿದೆ.ರಮೇಶ್ ಮಲ್ಲಯ್ಯ ಸ್ವಾಮಿ (39)ಕೊಲೆಯಾದ ದೇವಸ್ಥಾನದ ಪೂಜಾರಿ. ದೇವಸ್ಥಾನದ ಪೂಜೆ ವಿಷಯಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿದೆ.ಬೀದರ್‍ನ ಪಾಪನಾಶ ಕಲ್ಯಾಣ ಮಂಟದಲ್ಲಿ ಆರೋಪಿಗಳು ರಮೇಶ್ ಮೇಲೆ ರಾಡಿನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ದೇವಸ್ಥಾನದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ, ಶ್ವಾನದಳ ಹಾಗೂ ನ್ಯೂಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 Advertisement 




Sign in to your account
Username or Email Address


Password

 Remember Me


