ಬೆಂಗಳೂರು: ನಕಲಿ ಪಾಸ್‍ಪೋರ್ಟ್ ಆರೋಪದಡಿ ಪಶ್ಚಿಮ ಆಫ್ರಿಕಾದ ಸೆನಗಲ್‍ನಲ್ಲಿ 4 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಕರಾವಳಿ ಮೂಲದ ಭೂಗತ ದೊರೆ ರವಿ ಪೂಜಾರಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಹೇಗೆ ಪರಾರಿಯಾಗಿದ್ದಾನೆ ಎನ್ನುವುದಕ್ಕೆ ಸ್ಪಷ್ಟತೆ ಸಿಕ್ಕಿಲ್ಲ. ನ್ಯಾಯಾಲಯದಿಂದ ಬೇಲ್ ಪಡೆದು ರವಿ ಪೂಜಾರಿ ಬಿಡುಗಡೆಹೊಂದಿದ್ದಾನೆ. ಈ ಸಂದರ್ಭವನ್ನೇ ಬಳಸಿಕೊಂಡು ಆತ ಸೆನೆಗಲ್ ನಿಂದ ಪರಾರಿಯಾಗಿದ್ದಾನೋ ಅಥವಾ ಜೈಲಿನಿಂದಲೇ ಪರಾರಿಯಾಗಿದ್ದಾನೋ ಎನ್ನುವುದು ಖಚಿತವಾಗಿಲ್ಲ. ರವಿ ಪೂಜಾರಿ ಪರಾರಿಯಾಗಿದ್ದಾನೆ ಎಂದು ಸೆನೆಗಲ್ ಪತ್ರಿಕೆಗಳು ವರದಿ ಮಾಡಿವೆ.ಈ ಕುರಿತು ಪೊಲೀಸ್ ವಲಯದಲ್ಲೂ ಚರ್ಚೆ ಆರಂಭವಾಗಿದೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ರವಿ ಪೂಜಾರಿ ಸೆನೆಗಲ್‍ನಿಂದ ಪರಾರಿಯಾಗಿದ್ದಾನೆ ಎಂದು ಅಧಿಕೃತವಾಗಿ ಯಾರೂ ತಿಳಿಸಿಲ್ಲ.ಈ ಸುದ್ದಿ ನಿಜವೇ ಆದರೆ ಹಲವಾರು ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದ ರವಿ ಪೂಜಾರಿಯನ್ನು ಕಾನೂನು ಹೋರಾಟದಡಿ ಗಡೀಪಾರು ಮಾಡುವ ಭಾರತದ ಪೊಲೀಸರ ಪ್ರಯತ್ನಕ್ಕೆ ತಣ್ಣೀರು ಬಿದ್ದಿದೆ. ರವಿ ಪೂಜಾರಿಯನ್ನು ಕರೆತರಲು ಬೆಂಗಳೂರು, ಮುಂಬೈ ಪೊಲೀಸರು ಕಳೆದ 3 ತಿಂಗಳಿಂದ ಸೆನಗಲ್‍ನಲ್ಲಿ ಭಾರೀ ಪ್ರಯತ್ನ ನಡೆಸಿದ್ದರು.ಆತನ ವಿರುದ್ಧ ದಾಖಲಾಗಿರೋ ಕೇಸ್‍ಗಳು, ಸಾಕ್ಷ್ಯಾಧಾರಗಳನ್ನು ಫ್ರೆಂಚ್ ಭಾಷೆಗೆ ಭಾಷಾಂತರ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ಅಂತಿಮ ಹಂತದಲ್ಲಿದ್ದು, ಹಸ್ತಾಂತರ ಆಗುವ ನಿರೀಕ್ಷೆ ಇತ್ತು. ಈ ಮಧ್ಯೆ, ರವಿ ಪೂಜಾರಿ ಅರೆಸ್ಟ್ ಕ್ರೆಡಿಟ್‍ಗಾಗಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಡುವೆ ಫೆಬ್ರವರಿ ತಿಂಗಳಲ್ಲಿ ಭಾರೀ ಟ್ವೀಟ್ ಸಮರವೇ ನಡೆದಿತ್ತು.






 Advertisement 




Sign in to your account
Username or Email Address


Password

 Remember Me


