ಬೀದರ್: ಸರಿಯಾಗಿ ಕೆಲಸ ಮಾಡದೇ ಇದ್ದರೆ ನಾಯಿಗಳು ಸಹ ಮೂಸಿ ನೋಡಲ್ಲ ಎಂದು ಬ್ರಿಮ್ಸ್ ಆಸ್ಪತ್ರೆಯ ವೈದ್ಯರನ್ನು ಮತ್ತು ಅಧಿಕಾರಿಗಳನ್ನು ಸಂಸದ ಭಗವಂತ್ ಖೂಬಾ ತರಾಟೆಗೆ ತೆಗೆದುಕೊಂಡಿದ್ದಾರೆ.ಬ್ರಿಮ್ಸ್ ಆಸ್ಪತ್ರೆಯ ಮೇಲ್ಛಾವಣಿ ಕುಸಿತ ಹಿನ್ನೆಲೆ ಇಂದು ಅಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಖೂಬಾ ಅವರು, ನೀವು ಸರಿಯಾಗಿ ಕೆಲಸ ಮಾಡದಿದ್ದರೆ ನಾಯಿ ಸಹ ಮೂಸಿ ನೋಡುವುದಿಲ್ಲ. 1 ವರ್ಷದ ಹಿಂದೆ 100 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಬ್ರಿಮ್ಸ್ ಆಸ್ಪತ್ರೆ ಮೇಲ್ಛಾವಣಿ ಮಳೆಯಿಂದಾಗಿ ಕುಸಿದಿತ್ತು. ಜಿಲ್ಲಾ ಆಸ್ಪತ್ರೆಯ ಕಳಪೆ ಕಾಮಗಾರಿ ನಡೆದಿದೆ ಎಂದು ಇಂದು ಖೂಬಾ ಅವರು ಭೇಟಿ ನೀಡಿ ಸಭೆ ನಡೆಸಿ ಬ್ರೀಮ್ಸ್ ನಿರ್ದೇಶಕ ಕ್ಷೀರ ಸಾಗರನ್ನು ಸೇರಿದಂತೆ ವೈದ್ಯರನ್ನು ತರಾಟೆಗೆ ತಗೆದುಕೊಂಡರು.ಕಾಮಗಾರಿಯಲ್ಲಿ ನಿರ್ಲಕ್ಷ್ಯ ತೋರಿದ್ದ ಸಿಬ್ಬಂದಿಗಳನ್ನು ಯಾಕೆ ಅಮಾನತು ಮಾಡಿಲ್ಲಾ.? ಆಸ್ಪತ್ರೆಯಲ್ಲಿ ಏನ್ ಕೆಲಸ ಮಾಡುತ್ತಿದ್ದೀರಾ. ನಿಮ್ಮ ಜೀವನಕ್ಕಾಗಿ ಕೆಲಸ ಮಾಡುತ್ತಿದ್ದೀರಾ ಇಲ್ಲಾ ಜನರಿಗಾಗಿ ಕೆಲಸ ಮಾಡುತ್ತಿದ್ದಿರಾ..? ನಿರ್ಲಕ್ಷ್ಯ ತೋರಿದವರನ್ನು ಅಮಾನತು ಮಾಡದೇ ಹೇಗೆ ತನಿಖೆ ನಡೆಸುತ್ತಿರಾ ಎಂದು ಪ್ರಶ್ನಿಸಿ ಅಧಿಕಾರಿಗಳ ಮೇಲೆ ಕೋಪಗೊಂಡರು.Sign in to your account
Username or Email Address


Password

 Remember Me


