ಮಂಡ್ಯ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ನಾಲಿಗೆ ಸ್ಥಿಮಿತ ಕಳೆದುಕೊಂಡಿದ್ದಾರೆ.ಶುಕ್ರವಾರ ಮದ್ದೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ವೇಳೆ ಈ ಘಟನೆ ನಡೆದಿದೆ. ಕ್ಷೇತ್ರದಲ್ಲಿ ನಿಖಿಲ್‍ಗೆ ಮತ ಹಾಕದ ಜನರ ಮೇಲೆ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದ್ದಾರೆ.ಶಂಕುಸ್ಥಾಪನೆ ವೇಳೆ ಜನರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು. ಈ ವೇಳೆ ತಮ್ಮಣ್ಣ ಜನರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ರಾಮಸ್ಥರು ಮದ್ದೂರಮ್ಮನ ಕೆರೆಯಂಗಳದಲ್ಲಿ ನಡೆದ ಕುಡಿಯುವ ನೀರಿನ ಶಂಕುಸ್ಥಾಪನೆ ವೇಳೆ ದಲಿತ ಕಾಲೋನಿಗೆ ಚರಂಡಿ ಮತ್ತು ಸಮರ್ಪಕ ರಸ್ತೆ ನಿರ್ಮಿಸುವಂತೆ ಕೇಳಿಕೊಂಡಿದ್ದರು.ಗ್ರಾಮಸ್ಥರ ಮಾತುಕೇಳಿ ಸಿಟ್ಟಿಗೆದ್ದ ಸಚಿವ ತಮ್ಮಣ್ಣ, ಅಭಿವೃದ್ಧಿಗೆ ನಾವು ಬೇಕು, ಮತ ಹಾಕಲು ವೋಟು ನೀಡಲು ಅವರು ಬೇಕಾ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಮಣೆಗಾರಿಕೆ ಮಾಡಲು ಬರುತ್ತಾರೆ, ಅಭಿವೃದ್ದಿ ಕೆಲಸಕ್ಕಾಗಿ ನಮ್ಮನ್ನು ಕೇಳುವುದಕ್ಕೆ ನಾಚಿಕೆ ಆಗಲ್ವಾ ಎಂದು ಕಿಡಿಕಾರಿದ್ದಾರೆ.ಸಚಿವ ತಮ್ಮಣ್ಣ ಚುನಾವಣೆ ವೇಳೆಯಲ್ಲಿ ತಮ್ಮ ನಾಲಿಗೆ ಹರಿಯಬಿಟ್ಟು ಎಡವಟ್ಟು ಮಾಡಿಕೊಂಡಿದ್ದರು. ತಮ್ಮಣ್ಣ ಅವರು ಹೆಬ್ಬೆರಳು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಲ್ಲದೆ ಹೋದ ಕಡೆಗಳಲ್ಲಿ ಮತ ಹಾಕದ ಮತದಾರರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.Sign in to your account
Username or Email Address


Password

 Remember Me


