ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಗೆ ಪ್ರೇಮ ಪಾಠ ಮಾಡಿದ ಕಾಮುಕ ಶಿಕ್ಷಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಾಗೇಪಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ.ಪರಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಾಬು ಗೂಸ ತಿಂದ ಶಿಕ್ಷಕ. ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ಬಾಬು ಪ್ರೇಮಪಾಠ ಮಾಡಿದ್ದಾನೆ. ಶಾಲೆಯಲ್ಲಿಯೇ ಆಕೆಯ ಜೊತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದ ಎಂದು ಸ್ಥಳೀಯರು ದೂರಿದ್ದಾರೆ.ಈ ವಿಷಯ ತಿಳಿದ ಪೋಷಕರು ವಿದ್ಯಾರ್ಥಿನಿಯನ್ನು ಶಾಲೆಗೆ ಕಳಿಸದೇ ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಆದರೆ ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲವೆಂದು ತಿಳಿದ ಶಿಕ್ಷಕ ಬಾಬು ಮನೆಗೆ ಹೋಗಿದ್ದಾನೆ. ಈ ವೇಳೆ ವಿದ್ಯಾರ್ಥಿನಿಯ ಪೋಷಕರು ಮನಗೆ ಬಂದಿದ್ದು, ಬಾನುನನ್ನು ಹಿಡಿದು ಕಂಬಕ್ಕೆ ಕಟ್ಟಿದ್ದಾರೆ.ಶಿಕ್ಷಕ ಬಾಬು ವರ್ತನೆಯಿಂದ ಕೋಪಗೊಂಡ ವಿದ್ಯಾರ್ಥಿನಿಯ ಪೋಷಕರು ಕೋಲು ತೆಗೆದುಕೊಂಡು ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಮಹಿಳೆಯರು ಕಪಾಳ ಮೋಕ್ಷ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಿಕ್ಷಕ ಬಾಬುನನ್ನು ಬಂಧಿಸಿದ್ದಾರೆ.ನಮ್ಮ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಆರೋಪಿಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯ ಪೋಷಕರು ಬಾಗೇಪಲ್ಲಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶಿಕ್ಷಕ ಬಾಬು ವಿರುದ್ಧ ಐಪಿಸಿ ಸೆಕ್ಷನ್ 448 ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


