ಬೆಂಗಳೂರು: ಲೋಕಸಭೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಭಿಪ್ರಾಯಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದ್ದರೆ ಕಾಂಗ್ರೆಸ್‍ಗೆ 10 ಸೀಟು ಬರುತ್ತಿತ್ತು. ಜನ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವನ್ನು ಒಪ್ಪಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.ನಾನು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಲು ಯತ್ನಿಸಿದ್ದೆ. ಒಂದು ವೇಳೆ ಏಕಾಂಗಿಯಾಗಿ ಸ್ಪರ್ಧೆ ಮಾಡದಿದ್ದರೆ ನಿಮಗೆ ನಷ್ಟ ಎಂದು ಹೇಳಿದ್ದೆ. ಆದರೆ ಕಾಂಗ್ರೆಸ್ ಗೆಲ್ಲಬಹುದಾದ ಸೀಟನ್ನು ಕೂಡ ಬಿಟ್ಟುಕೊಟ್ಟಿತ್ತು. ಕಾಂಗ್ರೆಸ್ ನಲ್ಲಿ ಒಳ್ಳೆಯ ಅಭ್ಯರ್ಥಿಗಳಿದ್ದರೂ ಸೀಟು ಬಿಟ್ಟುಕೊಟ್ಟಿದ್ದರಿಂದ ಬಿಜೆಪಿಗೆ ಲಾಭ ಆಯ್ತು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


 Advertisement 







 Advertisement 




Sign in to your account
Username or Email Address


Password

 Remember Me


