ಮಡಿಕೇರಿ: ರಂಜಾನ್ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಪುಂಡಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ನಡೆದಿದೆ.ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಮೆರವಣಿಗೆ ಮಾಡಲಾಗುತಿತ್ತು. ಈ ವೇಳೆ ಕಿಡಿಗೇಡಿಗಳು ನಿಂತಿದ್ದ ಕಾರಿಗೆ ಕಲ್ಲು ತೂರಿದ್ದಾರೆ. ಕಲ್ಲು ತೂರಿದ ಪರಿಣಾಮ ಕಾರಿನ ಗಾಜುಗಳು ಪುಡಿ ಪುಡಿ ಆಗಿದೆ.ಕಲ್ಲು ತೂರಿದ್ದರಿಂದ ಗಾಂಧಿನಗರದ ಪ್ರವೀಣ್ ಎಂಬವರಿಗೆ ಸೇರಿದ ಕಾರು ಜಖಂಗೊಂಡಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದ ಕೆಲ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಘಟನೆಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.Sign in to your account
Username or Email Address


Password

 Remember Me


