ಮಡಿಕೇರಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಕಾವೇರಿ ನದಿ ಪಾಲಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ.ಮಡಿಕೇರಿ ಜೂನಿಯರ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆಕಾಶ್, ಗಗನ್, ಶಶಾಂಕ್ ಮೃತ ದುರ್ದೈವಿಗಳು. ರಂಜಾನ್ ನಿಮಿತ್ತ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮೂವರು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಕಾವೇರಿ ನದಿಯಲ್ಲಿ ಈಜುತ್ತಿದ್ದಾಗ ಈ ಘಟನೆ ನಡೆದಿದೆ.ಈಜುವ ವೇಳೆ ಒಬ್ಬನಿಗೆ ಈಜು ಬಾರದೆ ನೀರಿನಲ್ಲಿ ಮುಳುಗುತ್ತಿದ್ದ. ಇದನ್ನು ನೋಡಿದ ಉಳಿದ ಇಬ್ಬರು ಆತನನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ್ದಾರೆ.ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಕುಶಾಲನಗರ ನಗರ ಠಾಣೆಯ ಪೊಲೀಸರು ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಗಳ ಮೃತದೇಹವನ್ನು ಹೊರ ತೆಗೆದಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.Sign in to your account
Username or Email Address


Password

 Remember Me


