ಬೆಂಗಳೂರು: ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ ಕೆಲವು ತಿಂಗಳು ಸಾಮಾಜಿಕ ಜಾಲತಾಣದಿಂದ ಬ್ರೇಕ್ ತೆಗೆದುಕೊಂಡಿದ್ದರು. ಈಗ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ರಕ್ಷಿತ್ ಸಾಮಾಜಿಕ ಜಾಲತಾಣಕ್ಕೆ ರೀ-ಎಂಟ್ರಿ ಕೊಡಲಿದ್ದಾರೆ.ಸಾಮಾಜಿಕ ಜಾಲತಾಣಕ್ಕೆ ಹಿಂತಿರುವಂತೆ ರಕ್ಷಿತ್ ಅಭಿಮಾನಿಗಳು ಅವರಲ್ಲಿ ಕೇಳಿಕೊಳ್ಳುತ್ತಿದ್ದರು. ಇದೇ ಜೂನ್ 6ರಂದು ರಕ್ಷಿತ್ ತಮ್ಮ ಹುಟ್ಟುಹಬ್ಬ ಇದ್ದು, ಇದೇ ದಿನ ಸಾಮಾಜಿಕ ಜಾಲತಾಣಕ್ಕೆ ರೀ-ಎಂಟ್ರಿ ಕೊಡುವ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ನೀಡಲು ನಿರ್ಧರಿಸಿದ್ದಾರೆ.ರಕ್ಷಿತ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣವನ್ನು ಬಳಸುವುದಿಲ್ಲ. ಅವರ ಬದಲಾಗಿ ಅವರ ಟೀಂ ಸದಸ್ಯರು ಅವರ ಸಾಮಾಜಿಕ ಜಾಲತಾಣವನ್ನು ನೋಡಿಕೊಳ್ಳುತ್ತಾರೆ. ರಕ್ಷಿತ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಅವರ ಮುಂದಿನ ಚಿತ್ರದ ಟ್ರೈಲರ್, ಪೋಸ್ಟರ್ ಹಾಗೂ ಫಸ್ಟ್ ಲುಕ್ ಇದರಲ್ಲಿ ಪೋಸ್ಟ್ ಹಾಗೂ ಟ್ವೀಟ್ ಮಾಡಲಾಗುತ್ತದೆ.ರಕ್ಷಿತ್ ಅಭಿನಯದ ಬಹುನಿರೀಕ್ಷಿತ ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಚಿತ್ರೀಕರಣ ಇಂದು ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಬಗ್ಗೆ ಯಾವುದೇ ವಿಷಯವನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಳ್ಳಬಾರದು ಎಂದು ರಕ್ಷಿತ್ ರೀ-ಎಂಟ್ರಿ ಕೊಡಲಿದ್ದಾರೆ.ರಕ್ಷಿತ್ ಶೆಟ್ಟಿ ಮೊದಲು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗುತ್ತಿದ್ದರು. ತಮ್ಮ ವೈಯಕ್ತಿಕ ಹಾಗೂ ಸಿನಿಮಾಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು. ಈಗ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ರೀ-ಎಂಟ್ರಿ ಕೊಡುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ.Sign in to your account
Username or Email Address


Password

 Remember Me


