ಗದಗ: ಮಾರಕಾಸ್ತ್ರದಿಂದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.22 ವರ್ಷದ ಸಮೀರ್ ಕೊಲೆಯಾದ ಯುವಕ. ಮೃತ ಸಮೀರ್ ಕೌಜಗೇರಿ ಗ್ರಾಮದಲ್ಲಿ ಪೋಸ್ಟ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದು, ಜೂನ್ 1 ರಂದು ನಾಪತ್ತೆಯಾಗಿದ್ದನು. ಆದರೆ ಇಂದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ದಿನವೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇಂದು ಮೃತದೇಹದ ವಾಸನೆಯಿಂದ ಕೊಲೆ ಪ್ರಕರಣ ಬಯಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಸಮೀರ್ ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ.ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


