ಬೆಂಗಳೂರು: ಡಾ. ರಾಜ್‍ಕುಮಾರ್ ಕುಟುಂಬದಿಂದ ಈಗಾಗಲೇ ಇಬ್ಬರು ಮೊಮ್ಮಕ್ಕಳು ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗ ಅವರ ಮೊಮ್ಮಗಳು ಮೊದಲ ಬಾರಿಗೆ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.ಪೂರ್ಣಿಮ ಮತ್ತು ರಾಮ್‍ಕುಮಾರ್ ಮಗಳು ಧನ್ಯಾ ರಾಮ್ ಕುಮಾರ್ ಸಿನಿಮಾಗೆ ಎಂಟ್ರಿ ಕೊಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನೃತ್ಯ, ಫಿಟ್ನೆಸ್, ನಟನೆ ಸೇರಿದಂತೆ ಮುಂತಾದ ತರಬೇತಿ ಪಡೆಯುತ್ತಿದ್ದಾರೆ.ನಟ ಸೂರಜ್ ಗೌಡ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ ಧನ್ಯಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಬರುತ್ತಿದ್ದಾರೆ. ಇನ್ನೂ ಹೆಸರಿಡದ ಸಿನಿಮಾಗೆ ಸೂರಜ್ ಗೌಡ ಕಥೆ ಬರೆದಿದ್ದು, ನಾಯಕನಾಗಿ ಮಿಂಚುವ ಜೊತೆಗೆ ಮೊದಲ ಬಾರಿಗೆ ಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಮೊದಲ ಬಾರಿಗೆ ಸುಮನ್ ಜಾದೂಗಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.ಸದ್ಯಕ್ಕೆ ಚಿತ್ರತಂಡ ಪ್ರೀ ಪ್ರೊಡಕ್ಷನ್ ನಲ್ಲಿ ಬ್ಯುಸಿಯಿದ್ದು, ಮುಂದಿನ ತಿಂಗಳು ಜುಲೈನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾಗೆ ರಘು ದೀಕ್ಷಿತ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.ಈಗಾಗಲೇ ಪೂರ್ಣಿಮಾ, ರಾಮ್ ಕುಮಾರ್ ದಂಪತಿಯ ಮಗ ಧೀರನ್ ರಾಮ್‍ಕುಮಾರ್ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ರಾಘವೇಂದ್ರ ರಾಜ್‍ಕುಮಾರ್ ಮಗ ವಿನಯ್ ರಾಜ್ ಕುಮಾರ್ ಮೂರು ಸಿನಿಮಾಗಳಲ್ಲಿ ಅಭಿನಯಸಿದ್ದು, ಇನ್ನೂ ಎರಡು-ಮೂರು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.Sign in to your account
Username or Email Address


Password

 Remember Me


