ದಾವಣಗೆರೆ: ಕ್ಷುಲಕ ಕಾರಣಕ್ಕೆ ಸಹೋದರನೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ನಡೆದಿದೆ.ಜಯರಾಮ್ (45) ಕೊಲೆಯಾದ ವ್ಯಕ್ತಿ. ತಮ್ಮ ಮಹಾಂತೇಶ್ ಈ ಕೃತ್ಯ ಎಸಗಿದ್ದು, ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಈ ಘಟನೆ ನಡೆದಿದೆ. ಆರೋಪಿ ಮಹಾಂತೇಶ್ ತಾಯಿಯೊಂದಿಗೆ ಜಗಳ ಮಾಡುತ್ತಿದ್ದನು. ಇದನ್ನು ಪ್ರಶ್ನೆ ಮಾಡಿದ ಅಣ್ಣ ಜಯರಾಮ್‍ಗೆ ಕಬ್ಬಿಣದ ರಾಡ್ ನಿಂದ ಹೊಡೆದಿದ್ದಾನೆ.ಪರಿಣಾಮ ತೀವ್ರಗಾಯಗೊಂಡ ಜಯರಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಸುಕಿನ ಜಾವ 3 ಗಂಟೆಗೆ ಮೃತಪಟ್ಟಿದ್ದಾರೆ. ಪೊಲೀಸರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.Sign in to your account
Username or Email Address


Password

 Remember Me


