ಬೆಂಗಳೂರು: ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಆಗುವುದು ಅನುಮಾನವಾಗಿದೆ. ಸಂಪುಟ ಪುನಾರಚನೆ ಮಾಡದೆ ಕೇವಲ ಇಬ್ಬರು ಪಕ್ಷೇತರ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದ ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ್ ಸರಣಿ ಸಭೆ ನಡೆಸಿದ್ದಾರೆ. ಆದರೆ ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಬೇಡ. ಇರುವ ಖಾಲಿ ಸ್ಥಾನಗಳನ್ನು ಭರ್ತಿ ಮಾಡಿದರೆ ಸಾಕು ಎಂದು ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿದೆ.ಅಂತಿಮವಾಗಿ ಸಿದ್ದರಾಮಯ್ಯ ಪಟ್ಟಿಗೆ ಮಣಿದಿರುವ ಕೆ.ಸಿ ವೇಣುಗೋಪಾಲ್ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೆ ದೆಹಲಿಗೆ ತೆರಳಿದ್ದಾರೆ. ಒಂದು ವೇಳೆ ಸಂಪುಟ ಪುನಾರಚನೆ ಆಗದಿದ್ದಲ್ಲಿ ರಾಣೆಬೆನ್ನೂರು ಶಾಸಕ ಶಂಕರ್ ಮತ್ತು ಮುಳಬಾಗಿಲು ಶಾಸಕ ನಾಗೇಶ್ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.


 Advertisement 




 Advertisement 






 Advertisement 




Sign in to your account
Username or Email Address


Password

 Remember Me


