ಬೆಂಗಳೂರು: ನಟ ಶಿವಣ್ಣ ಅಭಿನಯದ ‘ಟಗರು’ ಸಿನಿಮಾದಲ್ಲಿ ಕಾನ್ಸ್‌ಟೇಬಲ್ ಸರೋಜಾ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದುಕೊಂಡಿದ್ದ ನಟಿ ತ್ರಿವೇಣಿ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ.ನಿರ್ದೇಶಕ ರತ್ನ್ ತೀರ್ಥ ನಿರ್ದೇಶಿಸುತ್ತಿರುವ ‘ಅಲ್ಲೇ ಡ್ರಾ ಅಲ್ಲೇ ಬಹುಮಾನ’ ಹಾರರ್ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ. ಚಿತ್ರತಂಡ ಬೆಂಗಳೂರಿನಲ್ಲಿ ಶೂಟಿಂಗ್ ಮುಗಿಸಿ ಕೊನೆಯ ಹಂತದ ಚಿತ್ರೀಕರಣವನ್ನು ಕಳೆದ ಮೂರು ದಿನದಿಂದ ಸಕಲೇಶಪುರದಲ್ಲಿ ಮಾಡಲಾಗುತ್ತಿತ್ತು.ಶುಕ್ರವಾರ ಕೂಡ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ನಟನೆ ಮಾಡುತ್ತಿದ್ದಾಗಲೇ ತ್ರಿವೇಣಿ ಕುಸಿದು ಬಿದ್ದಿದ್ದಾರೆ. ತಕ್ಷಣ ಚಿತ್ರತಂಡ ಸ್ಥಳದಲ್ಲಿಯೇ ಅವರನ್ನು ಆರೈಕೆ ಮಾಡಿದ್ದಾರೆ. ಸದ್ಯಕ್ಕೆ ತ್ರಿವೇಣಿ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಸಿನಿಮಾ ಜನನಿ ಫಿಲಂಸ್ ಲಾಂಛನದಡಿ ನಿರ್ಮಾಣವಾಗುತ್ತಿದ್ದು, ಬಿಜಿ ಪ್ರಶಾಂತ್ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ತ್ರಿವೇಣಿ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶೌರ್ಯ ನಾಯಕನಾಗಿ ನಟಿಸುತ್ತಿದ್ದಾರೆ.Sign in to your account
Username or Email Address


Password

 Remember Me


