ಮಂಡ್ಯ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.ಸತೀಶ್ ಕೊಲೆಯಾದ ಪತಿ. ಸತೀಶ್ ಮೇ 23 ರಂದು ಕಾಣೆಯಾಗಿದ್ದನು. ಈ ಬಗ್ಗೆ ಆತನ ಪತ್ನಿ ಪೊಲೀಸ್ ಠಾಣೆಗೆ ಬಂದು ಗಂಡ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದಳು.ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದರು. ಈ ವೇಳೆ ಪೊಲೀಸರಿಗೆ ಪತ್ನಿಯ ಮೇಲೆ ಅನುಮಾನ ಬಂದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮಾಡಿದಾಗ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಕೃತ್ಯ ಬಯಲಾಗಿದೆ.ಪತ್ನಿ ಹಾಗೂ ಆಕೆಯ ಪ್ರಿಯಕರ ಸತೀಶ್‍ನನ್ನು ಕೊಲೆ ಮಾಡಿದ ನಂತರ ಆತನ ಶವವನ್ನು ಗ್ರಾಮದ ಹೊರಗಡೆ ಹೂತು ಹಾಕಿದ್ದರು. ಈ ವಿಷಯ ತಿಳಿದ ಪೊಲೀಸರು ಇಂದು ಸತೀಶ್ ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


