ಹಾವೇರಿ: ಬ್ಯಾಡಗಿ ಪುರಸಭೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದ 16 ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಬ್ಯಾಡಗಿ ಪಟ್ಟಣದ 15 ಮತ್ತು 16ನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ಹನುಮಂತಪ್ಪ ಮತ್ತು ಸುಭಾಶ್ ಜಯಗಳಿಸಿದ್ದರು. ಈ ವೇಳೆ ಅಭಿಮಾನಿಗಳು ಬಣ್ಣದ ನೀರನ್ನು ಎಸೆದು ಸಂಭ್ರಮಿಸಿದ್ದಾರೆ. ಬಣ್ಣದ ನೀರಿಗೆ ಯಾರೋ ಕಿಡಿಗೇಡಿಗಳು ರಾಸಾಯನಿಕ ಮಿಶ್ರಣ ಮಾಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಅಸ್ವಸ್ಥರಾಗಿದ್ದಾರೆ.16 ಮಂದಿ ಕಾರ್ಯಕರ್ತರು ಅಲರ್ಜಿ, ಮೈ ಕೆರೆತದಿಂದ ಬಳಲುತ್ತಿದ್ದು ಅಸ್ವಸ್ಥರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಭೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


