ಕಾರವಾರ: ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಟೋ ಡ್ರೈವರ್ ಒಬ್ಬರು ಗುರುವಾರ ಉಚಿತ ಸೇವೆ ನೀಡಿ ಸಂಭ್ರಮಿಸುವುದಾಗಿ ಹೇಳಿಕೊಂಡಿದ್ದಾರೆ.ಬಿಜೆಪಿ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ದಾಖಲಿಸಿರುವುದು ಮೋದಿ ಅಭಿಮಾನಿಗಳಿಗೆ ಸಂತಸ ತಂದಿದೆ. ಮೋದಿ ಅಭಿಮಾನಿಗಳಲ್ಲಿ ಒಬ್ಬರಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಹನುಮಾನನಗರದ ಚಂದ್ರು ನಾಯ್ಕ ತನ್ನದೇ ಆದ ವಿಶಿಷ್ಠ ರೀತಿಯಲ್ಲಿ ಅಭಿಮಾನ ಮೆರೆದಿದ್ದಾರೆ.ಅಪ್ಪಟ ಮೋದಿ ಅಭಿಮಾನಿಯಾಗಿರುವ ಚಂದ್ರ ನಾಯ್ಕ ಅವರು ಮೋದಿಯವರು ಮತ್ತೆ ಪ್ರಧಾನಿಯಾಗುತ್ತಿರುವುದನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ಸಂಭ್ರಮಿಸಲು ಮುಂದಾಗಿದ್ದಾರೆ. ಮೇ 30 ರಂದು ಮೋದಿ 2ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ದಿನದಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ ತಮ್ಮ ಆಟೋದಲ್ಲಿ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.ಈ ಕುರಿತಂತೆ ಮಾತನಾಡಿದ ಚಂದ್ರು, ಮೋದಿಯವರು 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ನನಗೆ ಅತೀವ ಸಂತಸ ಮೂಡಿಸಿದೆ. ಹೀಗಾಗಿ, ಅವರು ಪ್ರಮಾಣವಚನ ಸ್ವೀಕಾರ ಮಾಡುವ ದಿನ ನನ್ನ ಆಟೋದಲ್ಲಿ ಎಲ್ಲರಿಗೂ ಉಚಿತ ಪ್ರಯಾಣ ಘೋಷಿಸಿದ್ದು, ಈ ಮೂಲಕ ದೇಶ ಸೇವೆಗೆ ನಿರ್ಧರಿಸಿದ್ದೇನೆ ಎಂದಿದ್ದಾರೆ.Sign in to your account
Username or Email Address


Password

 Remember Me


