ಮಂಡ್ಯ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಕೆಲಸ ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ, ಹಿಂಡವಾಳು ಸಚ್ಚಿದಾನಂದ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿತ್ತು. ಇದೀಗ ಇಂದು ನಟ ದರ್ಶನ್ ಅವರ ಮನೆಯಲ್ಲಿ ಭೋಜನ ಸೇವಿಸಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಹಿನ್ನೆಲೆ ಹಾಗೂ ಅಂಬರೀಶ್ ಜನ್ಮದಿನದ ಅಂಗವಾಗಿ ಮಂಡ್ಯದಲ್ಲಿ ಅಭಿಮಾನ ಸಮಾವೇಶ ಆಯೋಜನೆಗೊಂಡಿದ್ದು, ಕಾರ್ಯಕ್ರಮಕ್ಕೆ ನಟ ದರ್ಶನ್ ಮಂಡ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಧ್ಯಾಹ್ನದ ಊಟವನ್ನು ಕಾಂಗ್ರೆಸ್ ಉಚ್ಛಾಟಿತ ಮುಖಂಡನ ಸಚ್ಚಿದಾನಂದ ಮನೆಯಲ್ಲಿ ಭರ್ಜರಿ ಬಾಡೂಟ ಸೇವಿಸಿದ್ದಾರೆ. ನಟ ದರ್ಶನ್ ಜೊತೆ ನಟ ಪ್ರೇಮ್, ಸಚ್ಚಿದಾನಂದ ಮತ್ತು ಆಪ್ತರು ಭಾಗಿಯಾಗಿದ್ದರು. ಇದನ್ನೂ ಓದಿ: ನನ್ನಂತೆ ಸುಮಲತಾರಿಗೆ ಬೆಂಬಲಿಸುವ ಕಾರ್ಯಕರ್ತರನ್ನು ಉಚ್ಛಾಟನೆ ಮಾಡಿ ಪಕ್ಷಕ್ಕೆ ಬೀಗ ಹಾಕ್ತೀರಾ: ಸಚ್ಚಿದಾನಂದ ವಾಗ್ದಾಳಿಸಚ್ಚಿದಾನಂದ ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿಯಾಗಿ ಸುಮಲತಾ ಅಂಬರೀಶ್ ಅವರಿಗೆ ಸಹ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅವರನ್ನು ಉಚ್ಛಾಟನೆ ಮಾಡಿತ್ತು. ನನ್ನಂತಹ ಲಕ್ಷಾಂತರ ಕಾರ್ಯಕರ್ತರು ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುತ್ತಾರೆ. ಅವರನ್ನೂ ಉಚ್ಛಾಟನೆ ಮಾಡಿ ಪಕ್ಷಕ್ಕೆ ಬೀಗ ಜಡಿಯುತ್ತೀರಾ ಎಂದು ಹಿಂಡವಾಳು ಸಚ್ಚಿದಾನಂದ ಅಂದು ಆಕ್ರೋಶ ವ್ಯಕ್ತಪಡಿಸಿದ್ದರು.Sign in to your account
Username or Email Address


Password

 Remember Me


