ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ತಮ್ಮ ಪತ್ನಿಯ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ.ಮಂಗಳವಾರ ಅಜಯ್ ಅವರ ಪತ್ನಿ ಸ್ವಪ್ನಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹಾಗಾಗಿ ನಟ ಅಜಯ್ ತಮ್ಮ ಫೇಸ್‍ಬುಕ್‍ನಲ್ಲಿ ಪತ್ನಿಗೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಪತ್ನಿ ಜೊತೆ ಇರುವ ಮಗಳ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.ಅಜಯ್ ಫೋಟೋವನ್ನು ಫೇಸ್‍ಬುಕ್‍ನಲ್ಲಿ ಹಾಕಿ ಅದಕ್ಕೆ, ಹುಟ್ಟುಹಬ್ಬದ ಶುಭಾಶಯಗಳು ಸ್ವಪ್ನಾ ಮುಂಬರುವ ವರ್ಷದಲ್ಲಿ ನಿನಗೆ ಖುಷಿ ಸಿಗಲಿ. ಈ ದಿನದಂದು ನಾನು ನನ್ನ ಮಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸುತ್ತಿದ್ದೇನೆ” ಎಂದು ಬರೆದು ಪೋಸ್ಟ್ ಹಾಕಿದ್ದಾರೆ.ಅಜಯ್ ಮಗಳ ಫೋಟೋ ನೋಡಿ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಜಯ್ ಅವರ ಪತ್ನಿ ಸ್ವಪ್ನಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಕಮೆಂಟ್ ಮಾಡಿದ್ದಾರೆ.We Named her CHERISHMA!! ON:- 02.12.2018Full name "CHERISHMA AJAI RAO pic.twitter.com/rNc5nVkCQ1— Ajai Rao (@AjaiRao) December 3, 2018ಅಜಯ್ ಡಿ. 2ರಂದು ತಮ್ಮ ಮುದ್ದಾದ ಹೆಣ್ಣು ಮಗುವಿಗೆ `ಚೆರಿಷ್ಮಾ’ ಎಂದು ನಾಮಕರಣ ಮಾಡಿದ್ದರು. ಅಜಯ್ ರಾವ್ ಅವರ ಪತ್ನಿ ಸ್ವಪ್ನಾ ರಾವ್ ನ. 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ವೇಳೆ ಅಜಯ್ ರಾವ್ ಅವರು ತಮ್ಮ ಪತ್ನಿ ಸ್ವಪ್ನಾ ಹಾಗೂ ಪುಟ್ಟ ಕಂದಮ್ಮನ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೋ ವೈರಲ್ ಆಗಿತ್ತು.ಅಜಯ್ ರಾವ್ ಡಿ. 14, 2014ರಂದು ಸ್ವಪ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸ್ವಪ್ನಾ ಅವರು ಎಂಜಿನಿಯರ್ ಪದವಿ ಪಡೆದಿದ್ದು, ಅಜಯ್ ಅವರದ್ದು ಲವ್ ಕಮ್ ಅರೆಂಜ್ ಮ್ಯಾರೇಜ್. ಆಡಂಭರ ಇಲ್ಲದೆ ತುಂಬಾ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.This is my cherry's habbit of sleep,,If I put her on bed she cries????,,..she is daddy's girl ????????????????????????And I swear, the experience is heaven ❤ pic.twitter.com/YiKXxmceqD— Ajai Rao (@AjaiRao) December 4, 2018






 Advertisement 




Sign in to your account
Username or Email Address


Password

 Remember Me


