ಬಳ್ಳಾರಿ: ರಸ್ತೆ ಅಪಘಾತದಲ್ಲಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ನಂದೀಪುರ ದೊಡ್ಡ ಬಸವೇಶ್ವರ ಮಠದ ಶ್ರೀಗಳು ಪವಾಡ ಸದೃಶದಂತೆ ಪಾರಾಗಿದ್ದಾರೆ.ದಾವಣಗೆರೆ ಜಿಲ್ಲೆಯ ಜಗಳೂರು ಬಳಿಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಶ್ರೀಗಳು ಚಿತ್ರದುರ್ಗದಿಂದ ನಂದೀಪುರ ಮಠದತ್ತ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಘಟನೆ ನಡೆದ ಕೂಡಲೇ ಸ್ವಾಮೀಜಿಗಳು ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಅಂಬುಲೆನ್ಸ್ ಸಿಗದ ಹಿನ್ನೆಲೆಯಲ್ಲಿ ಸ್ಥಳೀಯ ಆಟೋ ಚಾಲಕರೊಬ್ಬರ ಸಹಾಯ ಪಡೆದು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಘಟನೆಯಲ್ಲಿ ಶ್ರೀಗಳಿದ್ದ ಕಾರಿನ ಎಡಭಾಗ ಜಖಂ ಆಗಿದ್ದು, ಮಹೇಶ್ವರಸ್ವಾಮೀಜಿಗಳು ಕ್ಷೇಮವಾಗಿದ್ದಾರೆ. ಈ ಸಂಬಂಧ ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


