ದಾವಣಗೆರೆ: ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಗೂಸಾ ಕೊಟ್ಟ ಘಟನೆ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.ಬಸವರಾಜ್ ಥಳಿತಕ್ಕೆ ಒಳಗಾದ ಕನ್ನಡ ಅಧ್ಯಾಪಕ. ಬಸವರಾಜ್ ವಿದ್ಯಾರ್ಥಿನಿಯರ ಫೋನ್ ನಂಬರ್ ತೆಗೆದುಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದನು. ಅಸಭ್ಯವಾಗಿ ವರ್ತಿಸಿದಲ್ಲದೆ ವಿದ್ಯಾರ್ಥಿನಿಯರಿಗೆ ಮೆಸೇಜ್ ಮಾಡಿ, ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು.ಅಧ್ಯಾಪಕನ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯರು ತನ್ನ ಸಹಪಾಠಿಗಳ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ನೋವನ್ನು ಕೇಳಿದ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿಯೇ ಅಧ್ಯಾಪಕನಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ.ನಮಗೆ ವಿದ್ಯಾರ್ಥಿನಿಯರು ದೂರು ನೀಡಿದ್ದರೆ ನಾವು ಅಧ್ಯಾಪಕನನ್ನು ಅಮಾನತು ಮಾಡುತ್ತಿದ್ದೇವು. ಆದರೆ ಇದುವರೆಗೂ ಯಾವುದೇ ವಿದ್ಯಾರ್ಥಿನಿ ನಮಗೆ ದೂರು ನೀಡಲಿಲ್ಲ. ಹಾಗಾಗಿ ನಾವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.Sign in to your account
Username or Email Address


Password

 Remember Me


