ಕೊಪ್ಪಳ: ನಾನು ಬಿಜೆಪಿಗೆ ಸೇರುತ್ತೇನೆ ಅಂತ ಟಿವಿಯಲ್ಲಿ ಬರುತ್ತಿದೆ. ಇದನ್ನು ನೋಡಿದ ನನ್ನ ಪತ್ನಿ, ಮಕ್ಕಳು ಹಾಗೂ ಕುಟುಂಬದವರು ಏನು ತಿಳಿದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಶಾಸಕ ಭೀಮಾನಾಯಕ್ ಪ್ರಶ್ನಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಹೋಗುತ್ತೇನೆ ಎನ್ನುವ ಕುರಿತು ನಾನು ಮನೆಯಲ್ಲಿ ಚರ್ಚೆ ಮಾಡಬೇಕಾಗುತ್ತ ಅಲ್ವಾ? ಬಿಜೆಪಿ ಸೇರುತ್ತೇನೆ ಎಂದು ಯಾರ ಬಳಿಯೂ ಹೇಳಿಕೊಂಡಿಲ್ಲ. ಅಷ್ಟೇ ಅಲ್ಲದೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರುವುದಿಲ್ಲ. ಬಿಜೆಪಿಗೆ ಯಾರು ಸೇರುತ್ತಾರೆ ಎಂಬ ಮಾಹಿತಿ ನನಗೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.ಮಾಜಿ ಸಿಎಂ ಸಿದ್ದರಾಮಯ್ಯ, ಸಿಂ ಕುಮಾರಸ್ವಾಮಿ ನಮ್ಮ ನಾಯಕರು. ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿ ಇರುತ್ತದೆ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದೆ. ಮುಂದಿನ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನನ್ನ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.ಬಿಜೆಪಿಗೆ ಜನ ಏನು ನೋಡಿ ಮತ ಹಾಕಿದ್ದಾರೆ ಎನ್ನುವುದು ಅರ್ಥವಾಗುತ್ತಿಲ್ಲ. ಭಾವನಾತ್ಮಕ ವಿಷಯ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಸರ್ಕಾರ ಬೀಳಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.Sign in to your account
Username or Email Address


Password

 Remember Me


